27
April, 2026

A News 365Times Venture

27
Monday
April, 2026

A News 365Times Venture

ಹಠಾತ್ ಕುಸಿದು ಬಿದ್ದು ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಸಾವು

Date:

ಹಾಸನ, ಏಪ್ರಿಲ್,27,2026 (www.justkannada.in): ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.

25 ವರ್ಷದ ಯುವತಿ ಶ್ವೇತಾ ಮೃತಪಟ್ಟ ಸಾಫ್ಟ್‌ವೇರ್ ಇಂಜಿನಿಯರ್ , ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಗಂಗಾಧರ್ ಮತ್ತು ಸರೋಜ ದಂಪತಿಯ ಪುತ್ರಿಯಾದ ಶ್ವೇತಾ ಏಪ್ರಿಲ್ 25ರಂದು ಸಂಜೆ ಮನೆಯಲ್ಲಿದ್ದಾಗ ಶ್ವೇತಾ ಹಠಾತ್ತಾಗಿ ಕುಸಿದು ಬಿದ್ದಿದ್ದರು.

ತಕ್ಷಣ  ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾಗಿದ್ದು ಆದರೆ, ಆಸ್ಪತ್ರೆಗೆ ತಲುಪುವ ವೇಳೆಗೆ ಶ್ವೇತಾ ಕೋಮಾಗೆ ಜಾರಿದ್ದರು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿರುವ ಬಗ್ಗೆ ಮಾಃಇತಿ ನೀಡಿದ್ದರು. ಆದರೆ ಚಿಕಿತ್ಸೆ ಮಾಡುತ್ತಿರುವಾಗಲೇ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡ ಶ್ವೇತಾ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ

ಮಗಳ ಸಾವಿನ ನೋವಿನ ನಡುವೆಯೂ ಪೋಷಕರು ಶ್ವೇತಾ ಅವರ ಅಂಗಾಂಗ ದಾನ ಮಾಡಲು ನಿರ್ಧಾರ ಮಾಡಿದ್ದರು.. ಆದರೆ ಆಕೆಯ ದೇಹದ ಆರೋಗ್ಯದ ಸ್ಥಿತಿಗತಿಯಿಂದಾಗಿ ಅಂಗಾಂಗ ದಾನ ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.

Key words: Software engineer, dies, slipping, Hassan

The post ಹಠಾತ್ ಕುಸಿದು ಬಿದ್ದು ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಚಿವ ಸುಧಾಕರ್ ಗೆ ಏನಾಗಿದೆ? ಮಾಹಿತಿ ಏಕೆ ಮುಚ್ಚಿಡುತ್ತಿದ್ದೀರಿ? ಬಹಿರಂಗಪಡಿಸಿ- ಕೇಂದ್ರ ಸಚಿವ HDK ಆಗ್ರಹ

ಬೆಂಗಳೂರು,ಏಪ್ರಿಲ್,27,2026 (www.justkannada.in): ಸಚಿವ ಡಿ.ಸುಧಾಕರ್ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು...

ಸಂಪುಟ ಪುನಾರಚನೆಯಾಗಿ ಬೇರೆಯವರಿಗೂ ಅವಕಾಶ ಸಿಗಬೇಕು- ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ,ಏಪ್ರಿಲ್,27,2026 (www.justkannada.in): ಸಚಿವ ಸಂಪುಟ ಪುನಾರಚನೆಯಾಗಿ ಬೇರೆಯವರಿಗೂ ಅವಕಾಶ  ಸಿಗಬೇಕು ಎಂದು...

ಮಾಡೋದೆ ರಾಜಕೀಯ, ಅದರಲ್ಲಿ ಬೆಳವಣಿಗೆ ಏನಿದೆ? ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,27,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ...

ಮೇ 15ಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಶಕ್ತಿ ಕೊಡುವ ಭರವಸೆ ಇದೆ-ಶಾಸಕ ರಂಗನಾಥ್

ಬೆಂಗಳೂರು,ಏಪ್ರಿಲ್,27,2026 (www.justkannada.in):  ಮೇ15 ರಂದು ಡಿಸಿಎಂ ಡಿಕೆ ಶಿವಕುಮಾರ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ...