ವಿಜಯಪುರ,ಮೇ1,2026 (www.justkannada.in): ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಕುರಿತು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್, ಸದ್ಯಕ್ಕೆ ರಾಜ್ಯದಲ್ಲಿ ಯಾವ ಬದಲಾವಣೆ ಇಲ್ಲ . ಮಲ್ಲಿಕಾರ್ಜುನ ಖರ್ಗೆ ಅವರೇ ನಮ್ಮ ಪಕ್ಷದ ಸುಪ್ರೀಂ. ಹೈಕಮಾಂಡ್ ಏನು ಹೇಳುತ್ತದೆಯೋ ಅದು ಸತ್ಯ ಬದಲಾವಣೆ ಇದ್ದರೆ ಮಾತ್ರ ಚರ್ಚೆ ಮಾಡುತ್ತೇವೆ ಎಂದಿದ್ದಾರೆ. ರಾಹುಲ್ ಗಾಂಧಿ ಸೇರಿ ಎಲ್ಲರೂ ಚರ್ಚೆ ಮಾಡುತ್ತೇವೆ ಎಂದು ಖರ್ಗೆ ಹೇಳಿದ್ದಾರೆ. ಹೀಗಾಗಿ ಯಾವ ಬದಲಾವಣೆ ಇಲ್ಲ ಎಂದರು.
Key words: Mallikarjuna Kharge, CM change, Minister, M.B. Patil
The post ಖರ್ಗೆ ಅವರೇ ಪಕ್ಷದ ಸುಪ್ರೀಂ: ರಾಜ್ಯದಲ್ಲಿ ಯಾವ ಬದಲಾವಣೆ ಇಲ್ಲ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




