ಬೆಂಗಳೂರು ,ಮೇ,5,2026 (www.justkannada.in): ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಾಗಿ ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು ಸಾಧಿಸಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿಯವರು ಅಂಚೆ ಮತಗಳನ್ನ ತಿದ್ದಿದ್ದಾರೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ” ಎಂದು ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದಿರುವ ಅಂಚೆ ಮತಗಳನ್ನು ತಿದ್ದುವ ಮೂಲಕ ಮರುಎಣಿಕೆಯಲ್ಲಿ ಅಸಿಂಧುಗೊಳಿಸಲಾಗಿದೆ. ಇಡೀ ದೇಶದಲ್ಲಿ ಇಂತಹ ಅಪರಾಧ ನಡೆದಿಲ್ಲ. ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಬಿಜೆಪಿ ಅಭ್ಯರ್ಥಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಅಂಚೆ ಮತಗಳನ್ನು ತಿದ್ದಲಾಗಿದೆ. ಅಧಿಕಾರಿಗಳು ಹಾಗೂ ಬಿಜೆಪಿ ಅಭ್ಯರ್ಥಿ ಈ ಅಕ್ರಮದಲ್ಲಿ ಭಾಗಿಯಾಗಿದ್ದು, ಈ ಬಗ್ಗೆ ಗಂಭೀರವಾದ ತನಿಖೆ ನಡೆಯಬೇಕು . ಚುನಾವಣಾ ಆಯೋಗವು ಈ ವಿಚಾರದಲ್ಲಿ ನ್ಯಾಯ ಒದಗಿಸಬೇಕಿದೆ. ಇದು ದೇಶದಲ್ಲೇ ಅತಿ ದೊಡ್ಡ ಷಡ್ಯಂತ್ರವಾಗಿದೆ. ನಾವು ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದರು.
Key words: Sringeri, postal votes, BJP, DCM, DK Shivakumar
The post ಶೃಂಗೇರಿ ಅಂಚೆ ಮತಗಳನ್ನ ತಿದ್ದಿದ್ದಾರೆ: ಇದರ ವಿರುದ್ಧ ಕಾನೂನು ಹೋರಾಟ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




