ತುಮಕೂರು,ಮೇ,9,2026 (www.justkannada.in): ಲಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ.
ಮಂಡ್ಯ ಮೂಲದ ಕುಮಾರಸ್ವಾಮಿ, ಗಾಯಿತ್ರಿ ಸೇರಿದಂತೆ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ ಎನ್ನಲಾಗಿದೆ. ಕುಣಿಗಲ್ ತಾಲ್ಲೂಕಿನ ಹೊನ್ನೇನಹಳ್ಳಿ ಬಳಿಕ ಗೊಬ್ಬರ ತುಂಬಿದ ಲಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿದ್ದು ಡಿಕ್ಕಿ ಹೊಡೆದ ಕಾರು ಛಿದ್ರವಾಗಿದೆ.
ಘಟನಾ ಸ್ಥಳಕ್ಕೆ ಕುಣಿಗಲ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.
Key words: Alto car, collides, lorry, Four, die, on the spot
The post ಲಾರಿಗೆ ಆಲ್ಟೋ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




