ತಿರವನಂತಪುರಂ,ಮೇ,14,2026 (www.justkannada.in): ಕೇರಳ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಆಯ್ಕೆಯಾಗಿದ್ದಾರೆ.
ಕೇರಳ ಸಿಎಂ ಹೆಸರನ್ನ ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದ್ದು ಕೇರಳದ ನೂತನ ಸಿಎಂ ಆಗಿ ವಿ.ಡಿ ಸತೀಶನ್ ಆಯ್ಕೆಯಾಗಿದ್ದಾರೆ. ಈ ಮೂಲಕ ಮುಖ್ಯಮಂತ್ರಿಯಾಗಲು ಲಾಬಿ ನಡೆಸಿದ್ದ ಕೆಸಿ ವೇಣುಗೋಪಾಲ್ ಗೆ ಮುಖಭಂಗವಾಗಿದೆ.
ವಿ.ಡಿ ಸತೀಶನ್ ಕೇರಳದ ಯುಡಿಎಫ್ ಮೈತ್ರಿಯ ಸಿಎಂ ಆಗಿದ್ದು ಇವರು ಪರವೂರು ಕ್ಷೇತ್ರದಿಂದ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2021ರಲ್ಲಿ ಕೇರಳ ವಿಧಾನಸಭಾ ವಿಪಕ್ಷ ನಾಯಕರಾಗಿದ್ದರು . ಕೇರಳ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Key words: V.D. Satheeshan, elected, new CM, Kerala
The post ಕೇರಳದ ನೂತನ ಸಿಎಂ ಆಗಿ ವಿ.ಡಿ ಸತೀಶನ್ ಆಯ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




