25
May, 2026

A News 365Times Venture

25
Monday
May, 2026

A News 365Times Venture

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು, ಮೇ, 25,2026 (www.justkannada.in):  ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ “108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ”ವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಇಡೀ ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ 108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರದ ಆರೋಗ್ಯ ಸೇವೆಯನ್ನು ಪ್ರಾರಂಭಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ತ್ವರಿತ  ಗತಿಯಲ್ಲಿ ಚಿಕಿತ್ಸೆ ದೊರೆಯಬೇಕು. ಈ ದಿಸೆಯಲ್ಲಿ ಅತ್ಯಾಧುನಿಕ ಮಾದರಿಯಲ್ಲಿ ಆರೋಗ್ಯ ಸೇವೆ ದೊರೆಯಲು ಈ ಕೇಂದ್ರ ಅತ್ಯಂತ ಸಹಕಾರಿಯಾಗಿದೆ.  ರಾಜ್ಯದಲ್ಲಿ ಸುಮಾರು 18 ವರ್ಷಗಳಿಂದ 108 ಆ್ಯಂಬುಲೆನ್ಸ್ ಸೇವೆ ನಡೆಯುತ್ತಿದೆ. 2025-26 ರ ಬಜೆಟ್ ಘೋಷಣೆಯಂತೆ  108 ತುರ್ತು ಆಂಬುಲೆನ್ಸ್ ಸೇವೆಗಳ ನಿರ್ವಹಣೆಗೆ ಮೀಸಲಾದ  ವ್ಯವಸ್ಥೆಯನ್ನು ರೂಪಿಸಲಾಗಿದೆ. ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ಲಭಿಸುವಂತಾಗುವುದು ಮುಖ್ಯ. ಸರ್ಕಾರದ ಗುಣಮಟ್ಟದ ಆರೋಗ್ಯ ಸೇವೆಯಿಂದ ಜನರ ವಿಶ್ವಾಸ ಹೆಚ್ಚುತ್ತದೆ ಎಂದರು.

ಗೋಲ್ಡನ್ ಅವಧಿ ಚಿಕಿತ್ಸೆಯಿಂದ ಶೇ.80 ರಷ್ಟು ಜನ ಬದುಕುಳಿದಿದ್ದಾರೆ

ರಸ್ತೆ ಅಪಘಾತಗಳು, ಹೆರಿಗೆ, ಹೃದಯರೋಗಿ ಸೇರಿದಂತೆ ಹಲವು ಕ್ಲಿಷ್ಟ ಸಂದರ್ಭಗಳಲ್ಲಿ ತುರ್ತು ಚಿಕಿತ್ಸೆಯ ಅತ್ಯವಶ್ಯವಾಗಿದ್ದು, ಆ ಗೋಲ್ಡನ್ ಅವರ್ ನಲ್ಲಿ ಚಿಕಿತ್ಸೆ ದೊರೆತರೆ, ರೋಗಿಗಳು ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. ಗೋಲ್ಡನ್ ಅವರ್ ನಲ್ಲಿ ದೊರೆತ ಚಿಕಿತ್ಸೆಯಲ್ಲಿ ಸುಮಾರು ಶೇ.80 ರಷ್ಟು ಜನರು ಬದುಕುಳಿದಿದ್ದಾರೆ. ಜೀವನ್ಮರಣದ ಹೋರಾಟದಲ್ಲಿ  ತುರ್ತು ಚಿಕಿತ್ಸೆ ಹೆಚ್ಚಿನ ಮಹತ್ವವನ್ನು ಹೊಂದಿದೆ. ಬೆಂಗಳೂರು ನಗರದಲ್ಲಿ 65 ರಿಂದ 70 ಆ್ಯಂಬುಲೆನ್ಸ್ ಗಳಿದ್ದು, ತುರ್ತು ಚಿಕಿತ್ಸೆಗೆ ನೆರವಾಗಿವೆ. 108 ಆ್ಯಂಬುಲೆನ್ಸ್ ವ್ಯವಸ್ಥೆ ಖಾಸಗಿಯವರ ಕೈಯಲ್ಲಿದ್ದಾಗ, ಅವರ ಹೊಣೆಗಾರಿಕೆಯನ್ನು ಪ್ರಶ್ನಿಸುವಂತಿರಲಿಲ್ಲ. ಆದರೆ ಪ್ರಸ್ತುತ ಈ ವ್ಯವಸ್ಥೇ ಸರ್ಕಾರದ ಅಧೀನದಲ್ಲಿರುವುದರಿಂದ ಈ ಸೇವೆಯ ಹೊಣೆಗಾರಿಕೆ ಹೆಚ್ಚಿದೆ ಎಂದರು.

ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧ

ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಮ್ಮ ಆರೋಗ್ಯ ಸಮಸ್ಯೆಗೆ ನೆರವು ಕೇಳಿ ಬರುವ ಜನರು, ಸರ್ಕಾರದ ಧನಸಹಾಯವನ್ನು ಬಯಸುತ್ತಾರೆ. ಆದರೆ ಜನರು ಖಾಸಗಿ ಆಸ್ಪತ್ರೆಗೆ ಹೋಗಿ, ಸರ್ಕಾರದಿಂದ ಧನಸಹಾಯ ಕೇಳುವ ಬದಲು, ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗೆ ಹೋಗಬೇಕು. ಕ್ಯಾನ್ಸರ್  ಸೇರಿದಂತೆ ಹಲವು ಕಾಯಿಲೆಗಳಿಗೆ  ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದುಬಾರಿಯಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಯ ವ್ಯವಸ್ಥೆಯಿದೆ. ಸಾಮಾನ್ಯ ಜನರಿಗೆ ಗುಣಮಟ್ಟದ ಆರೊಗ್ಯ ವ್ಯವಸ್ಥೆಯನ್ನು ನೀಡಲು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.

Key words: ambulance, service, available, across, state, CM Siddaramaiah

The post ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಐಎಎಲ್ ನಲ್ಲಿ ಕೆಎಸ್ ಐಐಡಿಸಿಗೆ 16.49 ಕೋಟಿ ರೂ. ಲಾಭಾಂಶ: ಹಸ್ತಾಂತರ

ಬೆಂಗಳೂರು,ಮೇ,25,2026 (www.justkannada.in):  ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತವು (ಬಿಐಎಎಲ್) ತನ್ನಲ್ಲಿ...

ವಿದ್ಯುತ್‌ ಪರಿವರ್ತಕಗಳ ಬ್ಯಾಂಕ್‌ ಸ್ಥಾಪನೆ: ಟ್ರಾನ್ಸ್‌ ಫಾರ್ಮರ್‌ ಗಳ ತುರ್ತು ನಿರ್ವಹಣೆಗೆ ‘ಸೆಸ್ಕ್‌’ ಸಜ್ಜು

ಮೈಸೂರು, ಮೇ, 25, 2026 (www.justkannada.in):  ಗ್ರಾಹಕರಿಗೆ ಅಡಚಣೆರಹಿತ ವಿದ್ಯುತ್‌ ಪೂರೈಕೆ...

ಸಿಎಂ ಸಿದ್ದು ಸು”ಭದ್ರ”; ಡಿಕೆಶಿಗೆ “ಗೃಹ”, ಡಿಕೆಸುಗೆ “ರಾಜ್ಯಸಭಾ” ಸ್ಥಾನ..? ಹೈಕಮಾಂಡ್‌ ತಂತ್ರ .!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ಮುಖ್ಯಮಂತ್ರಿ ಹುದ್ದೆ ಕುರಿತ ಚರ್ಚೆಗಳು ಜೋರಾಗಿರುವ...

2026ನೇ ಸಾಲಿನ ‘ಪದ್ಮ ಪ್ರಶಸ್ತಿ’ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ,ಮೇ,25,2026 (www.justkannada.in): ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಇಂದು ರಾಷ್ಟ್ರಪತಿ...