ನವದೆಹಲಿ,ಮೇ,26,2026 (www.justkannada.in): ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಸಭೆ ನಡೆಸುತ್ತಿದ್ದು ಈ ಬಗ್ಗೆ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ನವದೆಹಲಿಯಲ್ಲಿ ಮಾತನಾಡಿದ ಬಿ.ಕೆ ಹರಿಪ್ರಸಾದ್, ನಾಯಕತ್ವ ಬಗ್ಗೆ ಎಲ್ಲೂ ಚರ್ಚೆ ಆಗಿಲ್ಲ. ಇಂದು ಏನು ಚರ್ಚೆ ಎಂದು ಯಾರಿಗೂ ಗೊತ್ತಿಲ್ಲ. ವೇಣುಗೋಪಾಲ್, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತ್ರ ಗೊತ್ತು ಗೊಂದಲ ಇತ್ಯರ್ಥ ಈಗ ಅಂತಿಮ ಹಂತಕ್ಕೆ ಬಂದಿದೆ ಎಂದರು.
ಕೇವಲ ನನ್ನೊಬ್ಬನಿಂದ ಪಕ್ಷ ಅಧಿಕಾರಕ್ಕೆ ಬಂದಿದೆ ಅನ್ನೋದು ಸರಿಯಲ್ಲ ಕೇವಲ ಒಬ್ಬರಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ. 3 ವರ್ಷ ಆಯಿತು ಕಾರ್ಯಕರ್ತರಿಗೆ ಏನೂ ಮಾಡಿಲ್ಲ ಎಂದು ಬಿ.ಕೆ ಹರಿಪ್ರಸಾದ್ ತಿಳಿಸಿದರು.
Key words: no discussion, about, leadership, BK Hariprasad
The post ನಾಯಕತ್ವದ ಬಗ್ಗೆ ಎಲ್ಲೂ ಚರ್ಚೆ ಆಗಿಲ್ಲ: ಗೊಂದಲ ಇತ್ಯರ್ಥ ಅಂತಿಮ ಹಂತಕ್ಕೆ-ಬಿಕೆ ಹರಿಪ್ರಸಾದ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




