13
June, 2026

A News 365Times Venture

13
Saturday
June, 2026

A News 365Times Venture

ವಿ.ಪಿ.ಸಿಂಗ್ ಮತ್ತು ಕರ್ಪೂರಿ ಠಾಕೂರ್ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ..

Date:

ಬೆಂಗಳೂರು ಮೇ, 28,2026 (www.justkannada.in): 2026ನೇ ಸಾಲಿನ ವಿ.ಪಿ.ಸಿಂಗ್ ಮತ್ತು ಕರ್ಪೂರಿ ಠಾಕೂರ್ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಅತ್ಯುನ್ನತ ಗೌರವಗಳಲ್ಲಿ ಒಂದಾದ ವಿ.ಪಿ.ಸಿಂಗ್ ಪ್ರಶಸ್ತಿ ಮತ್ತು ಕರ್ಪೂರಿ ಠಾಕೂರ್ ಪ್ರಶಸ್ತಿಗಳನ್ನು ಘೋಷಿಸಿದೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಗೌರವಾಧ್ಯಕ್ಷ ಎಂ.ಎಸ್.ಮಣಿ, ರಾಜ್ಯಾಧ್ಯಕ್ಷ ಗಂಧರ್ವ ಸೇನಾ, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷ ಹಾಲಗಳಲೆ, ಈ ಬಾರಿ ವಿ.ಪಿ.ಸಿಂಗ್ ಪ್ರಶಸ್ತಿಗೆ 7 ಮಂದಿ , ಕರ್ಪೂರಿ ಠಾಕೂರ್ ಪುರಸ್ಕಾರಕ್ಕೆ7 ಮಂದಿ ಭಾಜನರಾಗಿದ್ದಾರೆ. ಸಾಮಾಜಿಕ, ಆರೋಗ್ಯ, ಶಿಕ್ಷಣ ಮತ್ತು ಸಮುದಾಯ ಸೇವೆಯಂತಹ ಕ್ಷೇತ್ರಗಳಲ್ಲಿ ಅಮೂಲ್ಯ ಕೊಡುಗೆ ನೀಡಿದವರಿಗೆ ವಿ.ಪಿ.ಸಿಂಗ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ವಿ.ಪಿ.ಸಿಂಗ್ ಪ್ರಶಸ್ತಿಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ದಿನೇಶ್, ಸ್ಪರ್ಶ ಆಸ್ಪತ್ರೆಯ ತಜ್ಞವೈದ್ಯ ಡಾ.ನಾಗೇಶ್ ಬಸವರಾಜ, ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆಯ ನಿರ್ದೇಶಕ ಡಾ.ಶಶಿಭೂಷಣ್, ಸಿಗಂದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ, ಹಿರಿಯ ಪತ್ರಕರ್ತರಾದ ರಾಜು ಕಂಬಾರ, ಕೆ.ಎಸ್.ಸೋಮಣ್ಣ, ಸಮಾಜಸೇವಕ ಲಕ್ಷ್ಮೀನಾರಾಯಣ ಅವರುಗಳು ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕರ್ಪೂರಿ ಠಾಕೂ‌ರ್ ಪ್ರಶಸ್ತಿಗೆ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ್, ಕರ್ನಾಟಕ ಮಾಧ್ಯಮ ಅಕಾಡೆಮಿಯ ಮಾಜಿ ಅಧ್ಯಕ್ಷ ಎಂ.ಸಿದ್ದರಾಜು, ಬೆಂಗಳೂರು ಉತ್ತರ ವಿ.ವಿ. ಉಪಕುಲಪತಿ ಪ್ರೊ. ಬಿ.ಕೆ. ರವಿ, ಹಿರಿಯ ಪತ್ರಕರ್ತರುಗಳಾದ ಲಕ್ಷ್ಮಣ ಕೊಡಸೆ, ಗಂಗಾಧರ ಮೊದಲಿಯಾ‌ರ್, ಐ.ಎಚ್.ಸಂಗಮದೇವ ಹಾಗೂ ರವಿ ಬಿದನೂರ ಅವರುಗಳು ಆಯ್ಕೆಯಾಗಿದ್ದಾರೆ ಎಂದು ಹೇಳಿದ್ದಾರೆ.

ವಿಶೇಷವಾಗಿ “ದೇವಮ್ಮ” ಪ್ರಶಸ್ತಿಗೆ ಪತ್ರಕರ್ತೆ ಮಿನಿ ತೇಜಸ್ವಿ ಅವರು ಆಯ್ಕೆಯಾಗಿದ್ದಾರೆ, ಪ್ರಶಸ್ತಿ ಪ್ರಧಾನ ಸಮಾರಂಭ ಬೆಂಗಳೂರಿನಲ್ಲಿ ನಡೆಯಲಿದ್ದು ಸದ್ಯದಲ್ಲೆ ದಿನಾಂಕ ಪ್ರಕಟಿಸಲಾಗುವುದು ಎಂದು ಸಂಘದ ಗೌರವಾಧ್ಯಕ್ಷ ಎಂ.ಎಸ್.ಮಣಿ ಪ್ರಕಟಣೆಯಲ್ಲಿ ತಿಳಿಸಿದರು.

Key words: VP Singh and Karpuri Thakur,  awardees, List,   published

The post ವಿ.ಪಿ.ಸಿಂಗ್ ಮತ್ತು ಕರ್ಪೂರಿ ಠಾಕೂರ್ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ.. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಚರ್ಚಿಸಿದ ಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಜೂನ್,12,2026 (www.justkannada.in):  ದೆಹಲಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಷ್ಟ್ರಪತಿ...

ತಮಿಳುನಾಡು ಸಿಎಂ ವಿಜಯ್ ವಿರುದ್ದ ಪ್ರತಿಭಟನೆಗೆ ನಿರ್ಧರಿಸಿದ್ದ ಕರವೇ ಕಾರ್ಯಕರ್ತರು ವಶಕ್ಕೆ

ಮಂಗಳೂರು,ಜೂನ್,12,2026 (www.justkannada.in):  ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಸಿಎಂ ವಿಜಯ್...

ಗ್ಯಾರಂಟಿ ಬಂದ್ ಗೆ ಹುನ್ನಾರ: ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ. ಬಂದಿಲ್ಲ- ಶ್ರೀರಾಮುಲು

 ಬೆಂಗಳೂರು,ಜೂನ್,12,2026 (www.justkannada.in):  ಗ್ಯಾರಂಟಿ ಯೋಜನೆಗಳನ್ನ ಪರಿಷ್ಕರಣೆ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ...

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ: ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಸಿಎಂ ವಿಜಯ್

ಉಡುಪಿ,ಜೂನ್,12,2026 (www.justkannada.in):  ತಮಿಳುನಾಡಿನ ಸಿಎಂ ವಿಜಯ್ ಇಂದು ಉಡುಪಿ ಜಿಲ್ಲೆ ಬೈಂದೂರು...