ಬೆಂಗಳೂರು,ಮೇ,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನ ಖಾಸಗಿ ಶಾಲೆಯಯೊಂದರಲ್ಲಿ ಬಾರೀ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.
ನಗರದ ವಿಶ್ವೇಶ್ವರಯ್ಯ ಲೇಔಟ್ ನಲ್ಲಿರುವ ಕೌಶಲ್ಯ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ 5ನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಶಾಲೆಯ ಕಟ್ಟಡ ಹೊತ್ತಿ ಉರಿದಿದೆ.ಅದೃಷ್ಟವಶಾತ್ ಇಂದು ಶಾಲೆಗೆ ರಜೆ ಇದ್ದಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ಮಕ್ಕಳಿಗೆ ತೊಂದರೆ ಸಂಭವಿಸಿಲ್ಲ.
ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಜ್ಞಾನಭಾರತಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Key words: fire accident, private school, Bangalore
The post ಖಾಸಗಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




