10
June, 2026

A News 365Times Venture

10
Wednesday
June, 2026

A News 365Times Venture

ವಿರಾಜಪೇಟೆ ಮಂಡಲ ಬಿಜೆಪಿ ಕಚೇರಿ ಉದ್ಘಾಟಿಸಿದ ಸಂಸದ ಯದುವೀರ್

Date:

ಕೊಡಗು,ಜೂನ್,9,2026 (www.justkannada.in): ಗೋಣಿಕೊಪ್ಪ ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ರಸ್ತೆಯಲ್ಲಿರುವ ಟಾಸ್ ಕಟ್ಟಡದಲ್ಲಿ ಭಾರತೀಯ ಜನತಾ ಪಾರ್ಟಿ ವಿರಾಜಪೇಟೆ ಮಂಡಲ ಕಚೇರಿಯನ್ನು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಪಕ್ಷದ ಕಚೇರಿ ಉದ್ಘಾಟನೆಯೊಂದಿಗೆ ಪಕ್ಷದ ಬೆಳವಣಿಗೆಯ ಭಾವನೆ ಹೆಚ್ಚಾಗಬೇಕು. ಕೊಡಗು ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆ ದೃಷ್ಟಿಯಿಂದ ಹೆಚ್ಚು ಕಾರ್ಯಾಲಯಗಳ ಅವಶ್ಯಕತೆಯಿದೆ. ಮುಂಬರುವ ಚುನಾವಣೆಗಳನ್ನು ಎದುರಿಸಲು ಹಾಗೂ ಕಾರ್ಯತಂತ್ರಗಳನ್ನು ರೂಪಿಸಲು ಕಾರ್ಯಲಯಗಳು ಶಕ್ತಿ ತುಂಬಲಿದೆ ಎಂದು ಹೇಳಿದರು.

ಕೊಡಗು ಜಿಲ್ಲೆಯಲ್ಲಿ ಹಸಿರು ಹೊದಿಕೆ ಹೆಚ್ಚಿದ್ದರೂ ಸಹ ಪ್ರಾಕೃತಿಕ ವಿಕೋಪಗಳು ಸಂಭವಿಸಿದೆ ಹಾಗೂ ವನ್ಯಜೀವಿ ಮಾನವ ಸಂಘರ್ಷ ಹೆಚ್ಚಿದೆ. ಪ್ರಕೃತಿ, ವನ್ಯಜೀವಿಗಳ ಮೇಲೆ ಕಾಳಜಿಯೊಂದಿಗೆ ಜನರಿಗೆ ನೆಮ್ಮದಿಯಿಂದ ಬದುಕುವ ಅವಕಾಶ ಕೂಡ ಆಗಬೇಕು ಎಂದು ಮೈಸೂರು ಕೊಡಗು ಸಂಸದ ಯದುವೀರ್ ಒಡೆಯರ್ ಅಭಿಪ್ರಾಯಪಟ್ಟರು.

ಈ ಸಂದರ್ಭ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿರಾಜಪೇಟೆ ಮಂಡಲ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ, ಎಂಎಲ್ಸಿ ಮಂಡೇಪAಡ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ.ಜಿ ಬೋಪಯ್ಯ,ಮಂಡಲ ಕಾರ್ಯದರ್ಶಿ ಕುಟ್ಟಂಡ ಅಜಿತ್ ಕರುಂಬಯ್ಯ, ಜಿಲ್ಲಾ ಉಪಾಧ್ಯಕ್ಷರುಗಳಾದ ಅರುಣ್ ಭೀಮಯ್ಯ, ಗುಮ್ಮಟ್ಟೀರ ಕಿಲನ್,ಜಿಲ್ಲಾ ಪ್ರ.ಕಾರ್ಯದರ್ಶಿ ನೆಲ್ಲೀರ ಚಲನ್ ಕುಮಾರ್ ಇದ್ದರು.

ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ..

ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ ಒಂದು ಗಿಡ ತಾಯಿಯ ಹೆಸರಿನಲ್ಲಿ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಸಂಸದ ಯದುವೀರ್ ಅವರು ವನ್ಯಜೀವಿ ಮಾನವ ಸಂಘಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಿದೆ. ಎಲ್ಲಾ ಜಿಲ್ಲೆಗಳಲ್ಲಿ ಪ್ರಕೃತಿಗೆ ಸಂಬಂಧಿಸಿದ ಸಮಸ್ಯೆಗಳು ಇದೆ. ಇದಕ್ಕೆ ಪೂರಕವಾಗಿ ಹಸಿರು ಹೊದಿಕೆ ಹೆಚ್ಚಿಸು ಕಾರ್ಯಕ್ರಮಗಳನ್ನು ಹೆಚ್ಚು ಮಾಡಬೇಕಿದೆ. ಪರಿಸರ ಕಾಳಜಿಯಿಂದ ಕೈಗೊಳ್ಳುವ ಕಾರ್ಯಕ್ರಮಗಳಿಗೆ ಸಮಾಜದಲ್ಲಿ ಸಕಾರಾತ್ಮಕವಾದ ಪ್ರತಿಕ್ರಿಯೆಗಳು ಸಿಗಲಿದೆ ಎಂದು ಹೇಳಿದರು.

ಎಂಎಲ್ಸಿ ಮಂಡೇಪಡ ಸುಜಾಕುಶಾಲಪ್ಪ ಮಾತನಾಡಿ ಹಸಿರೆಲೆ ಗೊಬ್ಬರಗಳ ಬಳಕೆ ಕಡೆಗೆ ಹೆಚ್ಚು ಗಮನ ಹರಿಸಬೇಕು. ಹಿರಿಯರು ಕಿರಿಯರಿಗೆ ತಮ್ಮ ತೋಟಗಳಲ್ಲಿ ಕೃಷಿಯ ಜವಾಬ್ದಾರಿಯನ್ನು ಅರಿವಿಕೆಗೆ ತರುವ ಮೂಲಕ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಬೇಕು. ಇದರಿಂದ ಪರಿಸರ ಕಾಳಜಿ ಕೂಡಾ ಹೆಚ್ಚಾಗಲಿದೆ ಎಂದು ಹೇಳಿದರು.

ಈ ಸಂದರ್ಭ ಎಂಎಲ್ಸಿ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ.ಜಿ ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಕೆವಿಕೆ ಮುಖ್ಯಸ್ಥ ಮುರಳಿದರ್ ಇದ್ದರು.

Key words: MP Yaduveer, inaugurates, Virajpet Mandal, BJP office

The post ವಿರಾಜಪೇಟೆ ಮಂಡಲ ಬಿಜೆಪಿ ಕಚೇರಿ ಉದ್ಘಾಟಿಸಿದ ಸಂಸದ ಯದುವೀರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಚಿವ ಸ್ಥಾನದಲ್ಲಿ ಮುಂದುವರಿಕೆ ಬಗ್ಗೆ ಹೈಕಮಾಂಡ್ ತೀರ್ಮಾನ-ಮಧು ಬಂಗಾರಪ್ಪ

ಶಿವಮೊಗ್ಗ,ಜೂನ್,9,2026 (www.justkannada.in):  ನನ್ನನ್ನು ಸಚಿವ ಸ್ಥಾನದಲ್ಲಿ ಮುಂದುವರಿಸುವ ಬಗ್ಗೆ ಹೈಕಮಾಂಡ್ ತೀರ್ಮಾನ...

ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಸ್ಪದ ಸಾವು

ಮಂಡ್ಯ,ಜೂನ್,9,2026 (www.justkannada.in): ಒಂದೇ ಕುಟುಂಬದ ಮೂವರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ...

‘ಕೈ’ನಾಯಕರು ದೇವೇಗೌಡರ ಕುರಿತು  ಮೊಸಳೆ ಕಣ್ಣೀರು ಸುರಿಸುವ ಅಗತ್ಯವಿಲ್ಲ- ಬಿವೈ ವಿಜಯೇಂದ್ರ ಟಾಂಗ್

ಬೆಂಗಳೂರು,ಜೂನ್,9,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್...

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ; 10 ಮಂದಿ ಬಂಧನ

ದಾವಣಗೆರೆ,ಜೂನ್,9,2026 (www.justkannada.in):  ತಂಪು ಪಾನೀಯದಲ್ಲಿ ಮತ್ತು ಬರುವ ಔಷಧಿ ನೀಡಿ ವಿವಾಹಿತ...