25
August, 2026

A News 365Times Venture

25
Tuesday
August, 2026

A News 365Times Venture

CM ವಿಜಯ್ ಪ್ರಬುದ್ಧ ನಾಯಕರು, ಪರಿಸ್ಥಿತಿ ಅರ್ಥ ಮಾಡಿಕೊಳ್ಳುವ ವಿಶ್ವಾಸವಿದೆ; DKS

Date:

 

ಬೆಂಗಳೂರು, ಆ. 02: ತಮಿಳುನಾಡು ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದೆ ಎಂಬ ಆ ರಾಜ್ಯದ ಕಾನೂನು ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ, “ತಮಿಳುನಾಡಿನ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ, ನನಗೆ ತಮಿಳುನಾಡು ನಾಡು ಒಂದು, ಕರ್ನಾಟಕ ಒಂದು, ಎರಡೂ ರಾಜ್ಯಗಳು ಒಂದು ಎಂಬ ಭಾವನೆ ಇದೆ. ಮೇಕೆದಾಟು ಯೋಜನೆ 90% ತಮಿಳುನಾಡಿಗೆ ಲಾಭ. ಯಾವುದೇ ಕಾರಣಕ್ಕೆ ಮೇಕೆದಾಟುವಿನಿಂದ ನೀರನ್ನು ಹಿಂದಕ್ಕೆ ತೆಗೆದುಕೊಂಡು ಬರಲು ಸಾಧ್ಯವಿಲ್ಲ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಕಾವೇರಿ ನದಿ ನೀರಿನ ವಿಚಾರವಾಗಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಭಾನುವಾರ ಸರ್ವಪಕ್ಷಗಳ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ತಮಿಳುನಾಡು ಸಿಎಂ ಯುವಕರು, ರಾಜಕೀಯದಲ್ಲಿ ಹೊಸಬರಾದರೂ ಅವರು ಪ್ರಬುದ್ಧ ನಾಯಕ. ಅವರು ವಾಸ್ತವ ಪರಿಸ್ಥಿತಿ ಅರಿಯುತ್ತಾರೆ ಎಂಬ ವಿಶ್ವಾಸವಿದೆ. ರಾಜಕೀಯ ಭಿನ್ನಾಭಿಪ್ರಾಯ ಏನೇ ಇದ್ದರೂ ಕರ್ನಾಟಕ ರಾಜ್ಯಕ್ಕೆ ಭೇಟಿ ನೀಡಲು ಮುಂದಾಗಿದ್ದಕ್ಕೆ ಅವರಿಗೆ ಅಭಿನಂದಿಸುವೆ” ಎಂದು ತಿಳಿಸಿದರು.

“ಕಾವೇರಿ ವಿಚಾರವಾಗಿ ಪರಿಸ್ಥಿತಿ ಬಿಗುವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಮನವಿಯಂತೆ ತಮಿಳುನಾಡು ಸಿಎಂ ವಿಜಯ್ ಅವರು ಕರ್ನಾಟಕಕ್ಕೆ ಭೇಟಿ ನೀಡುವ ಕಾರ್ಯಕ್ರಮ ಮುಂದೂಡಲು ಒಪ್ಪಿದ್ದಾರೆ. ಅವರು ಇಲ್ಲಿಗೆ ಬಂದಾಗ ಅವರ ವಿರುದ್ಧ ಘೋಷಣೆ ಕೂಗುವುದು ಸರಿಯಲ್ಲ. ನಾವು ಪರಸ್ಪರ ಗೌರವಿಸಿ, ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಅಂತಿಮವಾಗಿ ನಾವೆಲ್ಲರೂ ಭಾರತೀಯರು, ಒಟ್ಟಾಗಿ ಕೆಲಸ ಮಾಡಬೇಕು. ನಾವು ತಮಿಳುನಾಡು ನಡೆ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ನಾವು ನೆಲದ ಕಾನೂನು ಹಾಗೂ ಆದೇಶ ಪಾಲನೆ ಮಾಡುತ್ತಿದ್ದೇವೆ. ಹೀಗಾಗಿ ಯಾವುದೇ ತೊಂದರೆ ಆಗುವುದಿಲ್ಲ ಎಂಬ ವಿಶ್ವಾಸವಿದೆ” ಎಂದರು

ತಮಿಳುನಾಡು ಸಿಎಂ ಜೊತೆ ಸಭೆ ಯಾವಾಗ ಎಂದು ಕೇಳಿದಾಗ, “ನಾನು ಈ ಸಭೆಯನ್ನು ಕದ್ದುಮುಚ್ಚಿ ಮಾಡುವುದಿಲ್ಲ. ನಿಮಗೆ ಮಾಹಿತಿ ನೀಡುತ್ತೇವೆ” ಎಂದರು.

Key words: CM Vijay, is a Mature Leader, Confident, He Will Understand the Situation, D.K. Shivakumar

SUMMARY:

CM Vijay is a Mature Leader, Confident He Will Understand the Situation: D.K. Shivakumar

Bengaluru, Aug. 2: Responding to a question about the Tamil Nadu Law Minister’s statement that the state would approach the Supreme Court, Karnataka Deputy Chief Minister D.K. Shivakumar said, “I do not wish to comment on Tamil Nadu’s internal matters. For me, Tamil Nadu and Karnataka are like one family. The Mekedatu project will benefit Tamil Nadu by nearly 90%. Under no circumstances can water be diverted back because of the Mekedatu project.”

Shivakumar was addressing the media after the all-party meeting on the Cauvery river water issue held at the Chief Minister’s official residence, Krishna, on Sunday.

Referring to Tamil Nadu Chief Minister Vijay, Shivakumar said, “Although he is young and relatively new to politics, he is a mature leader. I am confident that he understands the ground realities. Despite political differences, I congratulate him for expressing his willingness to visit Karnataka.”

 

The post CM ವಿಜಯ್ ಪ್ರಬುದ್ಧ ನಾಯಕರು, ಪರಿಸ್ಥಿತಿ ಅರ್ಥ ಮಾಡಿಕೊಳ್ಳುವ ವಿಶ್ವಾಸವಿದೆ; DKS appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...