ನವದೆಹಲಿ,ಜುಲೈ,29,2026 (www.justkannada.in): ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಇಂದು ಈ ಕುರಿತು ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಜಲಸಂನ್ಮೂಲ ಸಚಿವರು, ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಸಿಡಬ್ಲ್ಯು ಆರ್ ಸಿ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ. ಮೇಲ್ಮನವಿ ಸಲ್ಲಿಸಲು ಕಾನೂನು ತಜ್ಞರು ಸಿದ್ದತೆ ನಡೆಸಿದ್ದಾರೆ ಎಂದರು.
ರಾಜ್ಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, ಕಾವೇರಿ ಜಲಾಶಯ ನೋಡಲು ತಮಿಳುನಾಡು ಸಿಎಂಗೆ ಮನವಿ ಮಾಡಿದ್ದೇವೆ. ವೈಮಾನಿಕ ಸಮೀಕ್ಷೆ ನಡೆಸಲು ಮನವಿ ಮಾಡಿದ್ದೇನೆ. ಅತಿಥಿಯನ್ನ ಗೌರವಪೂರ್ವಕವಾಗಿ ಬರಮಾಡಿಕೊಳ್ಳುತ್ತೇವೆ ಎಂದರು.
Key words: Decision, appeal, against, CWRC, order, CM, DK Shivakumar
The post CWRC ಆದೇಶದ ವಿರುದ್ದ ಮೇಲ್ಮನವಿಗೆ ನಿರ್ಧಾರ- ಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




