ಬೆಂಗಳೂರು,ಜೂನ್,3,2026 (www.justkannada.in): ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ವಿಪಕ್ಷಗಳ ಹಿರಿಯ ನಾಯಕರನ್ನ ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ದೇವೇಗೌಡರ ಆಶೀರ್ವಾದ ಪಡೆದರು. ಬಳಿಕ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು.
ಇದಕ್ಕೂ ಮುನ್ನ ಡಿಕೆ ಶಿವಕುಮಾರ್ ಅವರು ಉಸ್ತುವಾರಿ ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರನ್ನ ಭೇಟಿಯಾಗಿದ್ದರು.
Key words: DK Shivakumar, Meet, Former PM, HD Deve Gowda, receiving, blessings
The post HD ದೇವೇಗೌಡರ ಆಶೀರ್ವಾದ ಪಡೆದು ಕಾರ್ಯಕ್ರಮಕ್ಕೆ ಆಹ್ವಾನಿಸಿದ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




