ಬೆಂಗಳೂರು, ಆಗಸ್ಟ್, 22,2026 (www.justkannada.in): ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿದ್ದು ಸಾಕಷ್ಟು ಇದೀಗ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಮೂಡಿಸಿದೆ.
ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಸೇವೆ ಸಲ್ಲಿಸಿದ್ದರು.
ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದ ಅಕ್ರಮದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದರು. ಈ ಪ್ರಕರಣದಲ್ಲಿ ಜ್ಞಾನೇಂದ್ರ ಕುಮಾರ್ ಅವರು ಹಿಂದೆ ಕೆಪಿಎಸ್ ಸಿಯಲ್ಲಿ ಕಾರ್ಯನಿರ್ವಹಿಸಿದ್ದ ಅವಧಿಯಲ್ಲಿನ ಪಾತ್ರ ಸೇರಿದಂತೆ ಹಲವು ಅಂಶಗಳನ್ನು ತನಿಖಾ ಸಂಸ್ಥೆಗಳು ಪರಿಶೀಲಿಸುತ್ತಿವೆ ಎಂಬ ಮಾಹಿತಿ ಇದ್ದು, ಇಡಿ ದಾಳಿ ನಡೆದ ಮರುದಿನವೇ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರು ನಾಪತ್ತೆಯಾಗಿರದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಅವರು ಗುರುವಾರ ಬೆಳಗ್ಗೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಬಳಿಕ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಜ್ಞಾನೇಂದ್ರ ಕುಮಾರ್ ದೆಹಲಿಗೆ ತೆರಳಲು ವಿಮಾನದ ಟಿಕೆಟ್ ಬುಕ್ ಮಾಡಿದ್ದರು ಎನ್ನಲಾಗಿದೆ.
Key words: IAS officer, Gyanendra Kumar, mysteriously, Missing
The post IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




