ಬೆಂಗಳೂರು, ಜುಲೈ,1,2025 (www.justkannada.in): ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ,ಕೇಂದ್ರ ಆಡಳಿತ ನ್ಯಾಯಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತು ಆದೇಶವನ್ನು ರದ್ದು ಮಾಡಿರುವ ಬಗ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿ ‘ವಾರ್ತಾ ಸೌಧ’ದಲ್ಲಿ ಮಾಧ್ಯಮದವರೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಅವಕಾಶ ದೊರೆತಿದ್ದರಿಂದ ಮುಖ್ಯಮಂತ್ರಿಯಾದೆ
ಶಾಸಕ ಬಿ.ಆರ್.ಪಾಟೀಲ್ ರವರು ಸಿದ್ದರಾಮಯ್ಯರವರು ಅದೃಷ್ಟದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಅವರ ಹೇಳಿಕೆ ಬಗ್ಗೆ ಮಾಹಿತಿಯಿಲ್ಲ. ಬಿ.ಆರ್.ಪಾಟೀಲ್ ಹಾಗೂ ನಾನು ಒಟ್ಟಿಗೆ ಶಾಸಕರಾಗಿದ್ದರಿಂದ ಹಾಗೂ ನನಗೆ ಮುಖ್ಯಮಂತ್ರಿಯಾಗಲು ಅವಕಾಶ ದೊರೆತಿದ್ದರಿಂದ, ಬಿ.ಆರ್.ಪಾಟೀಲ್ ರವರು ಈ ರೀತಿ ಹೇಳಿಕೆ ನೀಡಿರಬಹುದು. ಎಂದರು.
ಜಾತಿಗಣತಿ ವಿವರವನ್ನು ಆನ್ ಲೈನ್ ನಲ್ಲಿಯೂ ಸಲ್ಲಿಸುವ ವ್ಯವಸ್ಥೆಯಿದೆ
ಜಾತಿಗಣತಿ ನಡೆಸಲಾಗಿದೆ ಎಂಬ ಪೋಸ್ಟರ್ ಗಳನ್ನು ಮನೆಗಳಿಗೆ ಭೇಟಿ ನೀಡದೇ, ಮನೆಯ ಮುಂದೆ ಅಂಟಿಸುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಜಾತಿಗಣತಿಯನ್ನು ನಡೆಸಲು ಹಲವು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಆನ್ ಲೈನ್ ಮೂಲಕವೂ ಜಾತಿವಿವರಗಳನ್ನು ನೀಡಬಹುದು ಅಥವಾ ಮನೆಗಳಿಗೆ ಭೇಟಿ ನೀಡಿ ವಿವರಗಳನ್ನು ಪಡೆಯಬಹುದು. ಈ ಬಗ್ಗೆ ಸತ್ಯಾಸತ್ಯತೆ ತಿಳಿದು ಮಾಧ್ಯಮದವರು ಪ್ರಶ್ನಿಸಬೇಕು ಎಂದರು.
Key words: CAT, Order, Decision, submit, Appeal, CM Siddaramaiah
The post IPS ಅಧಿಕಾರಿ ಅಮಾನತು ರದ್ದು ಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಸೂಕ್ತ ತೀರ್ಮಾನ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




