3
March, 2026

A News 365Times Venture

3
Tuesday
March, 2026

A News 365Times Venture

IPS ಅಧಿಕಾರಿ ಅಮಾನತು ರದ್ದು ಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಸೂ‍ಕ್ತ ತೀರ್ಮಾನ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು, ಜುಲೈ,1,2025 (www.justkannada.in):  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ,ಕೇಂದ್ರ ಆಡಳಿತ ನ್ಯಾಯಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತು ಆದೇಶವನ್ನು ರದ್ದು ಮಾಡಿರುವ ಬಗ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿ ‘ವಾರ್ತಾ ಸೌಧ’ದಲ್ಲಿ ಮಾಧ್ಯಮದವರೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಅವಕಾಶ ದೊರೆತಿದ್ದರಿಂದ ಮುಖ್ಯಮಂತ್ರಿಯಾದೆ

ಶಾಸಕ ಬಿ.ಆರ್.ಪಾಟೀಲ್ ರವರು ಸಿದ್ದರಾಮಯ್ಯರವರು ಅದೃಷ್ಟದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಅವರ ಹೇಳಿಕೆ ಬಗ್ಗೆ ಮಾಹಿತಿಯಿಲ್ಲ. ಬಿ.ಆರ್.ಪಾಟೀಲ್ ಹಾಗೂ ನಾನು ಒಟ್ಟಿಗೆ ಶಾಸಕರಾಗಿದ್ದರಿಂದ ಹಾಗೂ  ನನಗೆ ಮುಖ್ಯಮಂತ್ರಿಯಾಗಲು ಅವಕಾಶ ದೊರೆತಿದ್ದರಿಂದ, ಬಿ.ಆರ್.ಪಾಟೀಲ್ ರವರು ಈ ರೀತಿ ಹೇಳಿಕೆ ನೀಡಿರಬಹುದು. ಎಂದರು.

ಜಾತಿಗಣತಿ ವಿವರವನ್ನು ಆನ್ ಲೈನ್ ನಲ್ಲಿಯೂ ಸಲ್ಲಿಸುವ ವ್ಯವಸ್ಥೆಯಿದೆ

ಜಾತಿಗಣತಿ ನಡೆಸಲಾಗಿದೆ ಎಂಬ ಪೋಸ್ಟರ್ ಗಳನ್ನು ಮನೆಗಳಿಗೆ ಭೇಟಿ ನೀಡದೇ, ಮನೆಯ ಮುಂದೆ ಅಂಟಿಸುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಜಾತಿಗಣತಿಯನ್ನು ನಡೆಸಲು ಹಲವು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಆನ್ ಲೈನ್  ಮೂಲಕವೂ ಜಾತಿವಿವರಗಳನ್ನು ನೀಡಬಹುದು ಅಥವಾ ಮನೆಗಳಿಗೆ ಭೇಟಿ ನೀಡಿ ವಿವರಗಳನ್ನು ಪಡೆಯಬಹುದು. ಈ ಬಗ್ಗೆ ಸತ್ಯಾಸತ್ಯತೆ ತಿಳಿದು ಮಾಧ್ಯಮದವರು ಪ್ರಶ್ನಿಸಬೇಕು ಎಂದರು.vtu

Key words: CAT, Order, Decision, submit, Appeal, CM Siddaramaiah

The post IPS ಅಧಿಕಾರಿ ಅಮಾನತು ರದ್ದು ಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಸೂ‍ಕ್ತ ತೀರ್ಮಾನ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ನಾವು ಭಾರತಕ್ಕೆ ಜೀವಂತವಾಗಿ ಬರ್ತೇವೆ ಅಂದುಕೊಂಡಿರಲಿಲ್ಲ..!’ ದುಬೈ ಪರಿಸ್ಥಿತಿ ಬಗ್ಗೆ ವಿವರಿಸಿದ MLC ಭೊಜೇಗೌಡ

ಬೆಂಗಳೂರು,ಮಾರ್ಚ್,3,2026 (www.justkannada.in):  ಇರಾನ್ ಮೇಲೆ ಇಸ್ರೇಲ್ ,ಅಮೇರಿಕಾ ದಾಳಿ ಬೆನ್ನಲ್ಲೆ ಮಧ್ಯ...

ಖಮನೈ ಹತ್ಯೆ ಖಂಡಿಸಿ ಪ್ರತಿಭಟನೆ ವಿಚಾರ: ತಪ್ಪಾಗಿದ್ರೆ ಪರಿಶೀಲಿಸಿ ಕ್ರಮ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,3,2026 (www.justkannada.in): ಇರಾನ್ ಸರ್ವೋಚ್ಚ ನಾಯಕ ಖಮನೈ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ...

ಒಳಮೀಸಲಾತಿ ಅನುಷ್ಠಾನಕ್ಕೆ ಎಲ್ಲಾ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ- ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು,ಮಾರ್ಚ್,2,2026 (www.justkannada.in): ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ...

ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ- ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಮಾರ್ಚ್,2,2026 (www.justkannada.in):  ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ...