16
July, 2025

A News 365Times Venture

16
Wednesday
July, 2025

A News 365Times Venture

JK EXCLUSIVE: ನಿವೃತ್ತ ಡಿಜಿಪಿ  ಓಂಪ್ರಕಾಶ್‌ ಹತ್ಯೆ ಪ್ರಕರಣ : ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್.‌  ಬಂಧನ ಭೀತಿಯಲ್ಲಿಪುತ್ರಿ ಕೃತಿ..!

Date:

 ಬೆಂಗಳೂರು, ಜೂ.೦೭,೨೦೨೫ :  ರಾಜ್ಯವನ್ನೇ ಬೆಚ್ಚಿಬಿಳಿಸಿದ್ದ ಕರ್ನಾಟಕದ ನಿವೃತ್ತ ಡಿಜಿ ಓಂ ಪ್ರಕಾಶ್ ರವರ ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿ ಅವರ ಮಗಳು ಕೃತಿ ನಗರದ ಸಿಟಿ ಸಿವಿಲ್  ಕೋರ್ಟ್‌ ಗೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಈಗ ಓಂ ಪ್ರಕಾಶ್ ಪುತ್ರಿಗೆ ಬಂಧನ ಭೀತಿ ಎದುರಾಗಿದೆ.

ಈಗಾಗಲೇ ಪ್ರಕರಣದ ಮೊದಲನೇ ಆರೋಪಿ, ಓಂಪ್ರಕಾಶ್‌  ಅವರ ಪತ್ನಿ ಪಲ್ಲವಿ ಪೊಲೀಸರ ವಶದಲ್ಲಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ. ಪ್ರಕರಣದ ಎರಡನೇ ಆರೋಪಿ, ಪುತ್ರಿ ಕೃತಿ ಮಾನಸಿಕ ಅಸ್ವಸ್ಥೆ ಎಂಬ ಕಾರಣದಿಂದ ನಿಮ್ಹಾನ್ಸ್‌ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಮಾನಸಿಕ ಅಸ್ಥಸ್ತತೆಯಿಂದ ಬಳಲುತ್ತಿದ್ದಾಕೆ ಆಸ್ಪತ್ರೆಯಿಂದಲೇ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದು ಆಶ್ಚರ್ಯಕ್ಕೆ ಎಡೆಮಾಡಿಕೊಟ್ಟಿತ್ತು.

ಈ ನಡುವೆ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಪರಿಣಾಮ ಈಗ ಕೃತಿ ಬಂಧನದ ಭೀತಿ ಎದುರಿಸುವಂತಾಗಿದೆ.

 ಘಟನೆ ಹಿನ್ನೆಲೆ:

 ನಿವೃತ್ತ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಓಂಪ್ರಕಾಶ್‌ (68) ಅವರನ್ನು ಪತ್ನಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಏ. ೨೦ ರಂದು ನಡೆದಿತ್ತು. ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ವಾಸವಾಗಿದ್ದ ಓಂ ಪ್ರಕಾಶ್‌ ಅವರ ಹತ್ಯೆ ಭಾನುವಾರ ಮಧ್ಯಾಹ್ನ ಸುಮಾರು 3.30ಕ್ಕೆ ನಡೆದಿದ್ದು, ಘಟನೆ ಸಂಬಂಧ ಮೃತರ ಪತ್ನಿ ಪಲ್ಲವಿ ಹಾಗೂ ಪುತ್ರಿ ಕೃತಿ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು.

ಬಿಹಾರ ಮೂಲದ ಓಂ ಪ್ರಕಾಶ್‌ 1981ರ ಬ್ಯಾಚ್‌ನ ಕರ್ನಾಟಕ ಕೇಡರ್‌ ಐಪಿಎಸ್ ಅಧಿಕಾರಿ. ರಾಜ್ಯದ ವಿವಿಧ ಜಿಲ್ಲೆ ಹಾಗೂ ನಗರ ಮತ್ತು ಪೊಲೀಸ್‌ ಇಲಾಖೆಯ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದರು. 2015ರಲ್ಲಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿ 2017ರಲ್ಲಿ ನಿವೃತ್ತರಾಗಿದ್ದರು. ನಿವೃತ್ತಿ ಬಳಿಕ ಎಚ್ಎಸ್‌ಆರ್‌ ಲೇಔಟ್‌ನ ಮೂರು ಅಂತಸ್ತಿನ ಮನೆಯಲ್ಲಿ ಕುಟುಂಬದೊಂದಿಗೆ ನೆಲೆಸಿದ್ದರು.

FILE PHOTOS

ಭಾನುವಾರ ಮನೆಯಲ್ಲಿ ಓಂ ಪ್ರಕಾಶ್‌, ಪತ್ನಿ ಪಲ್ಲವಿ ಹಾಗೂ ಪುತ್ರಿ ಇದ್ದರು. ಮಧ್ಯಾಹ್ನ ದಂಪತಿ ನಡುವೆ ಗಲಾಟೆ. ಆಗ ಪತ್ನಿ ಪಲ್ಲವಿ ಚಾಕುವಿನಿಂದ ಇರಿದು ಒಂ ಪ್ರಕಾಶ್‌ ರ ಕೊಲೆ. ಬಳಿಕ ಸ್ನೇಹಿತೆಯಾಗಿರುವ ಮಾಜಿ ಐಪಿಎಸ್‌ ಅಧಿಕಾರಿಯೊಬ್ಬರ ಪತ್ನಿಗೆ ವಿಡಿಯೋ ಕರೆ ಮಾಡಿ ‘ಐ ಕಿಲ್ಲಡ್‌ ಮಾನ್‌ಸ್ಟರ್‌’ ಎಂದು ಹೇಳಿದರು.  ಆ ಮಾಜಿ ಐಪಿಎಸ್‌ ಅಧಿಕಾರಿ ಪತ್ನಿ ಗಾಬರಿಗೊಂಡು ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಿದರು.

ರಾಜ್ಯದಲ್ಲಿ 36 ವರ್ಷ ಸೇವೆ

ಬಿಹಾರದ ಚಂಪಾರಣ್‌ ಜಿಲ್ಲೆಯ ಓಂ ಪ್ರಕಾಶ್‌ ಅವರು 1981ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಪಿಎಸ್‌ ಅಧಿಕಾರಿಯಾಗಿ ಹರಪನಹಳ್ಳಿ ಉಪವಿಭಾಗದ ಎಎಸ್ಪಿಯಾಗಿ ಸೇವೆ ಆರಂಭಿಸಿದ್ದರು. ಬಳಿಕ ರಾಜ್ಯ ಜಾಗೃತ ಆಯೋಗ, ಕರ್ನಾಟಕ ಲೋಕಾಯುಕ್ತ ಎಸ್ಪಿ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದರು. ಡಿಐಜಿ( ಆಡಳಿತ), ಡಿಐಜಿ ಉತ್ತರ ವಲಯ, ಡಿಐಜಿ(ತರಬೇತಿ), ಐಜಿಪಿ, ಐಸಿಡಿ ಐಜಿಪಿ, ಸಾರಿಗೆ ಇಲಾಖೆ ಆಯುಕ್ತರಾಗಿಯೂ ಕೆಲಸ ಮಾಡಿದ್ದರು. ಎಡಿಜಿಪಿ (ಅಪರಾಧ), ಡಿಜಿ(ಡಿಸಿಆರ್‌ಇ), ಡಿಜಿ ಅಗ್ನಿಶಾಮಕ ಸೇರಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾಗಿ ಎರಡು ವರ್ಷ ಕೆಲಸ 2017ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು.

key words: Retired DGP Omprakash, murder case, Court, anticipatory bail, Daughter Kruthi , fear of arrest

vtu

SUMMARY:

Retired DGP Omprakash murder case: Court cancels anticipatory bail. Daughter Kruthi is in fear of arrest.

In the case of the murder of retired DG Om Prakash, which shocked the entire state, the City Civil Court of Karnataka has rejected the anticipatory bail application filed by the second accused’s daughter, Kruthi. In this context, Om Prakash’s daughter now faces the threat of arrest.

The post JK EXCLUSIVE: ನಿವೃತ್ತ ಡಿಜಿಪಿ  ಓಂಪ್ರಕಾಶ್‌ ಹತ್ಯೆ ಪ್ರಕರಣ : ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್.‌  ಬಂಧನ ಭೀತಿಯಲ್ಲಿಪುತ್ರಿ ಕೃತಿ..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಆರ್ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಭೇಟಿ, ಪರಿಶೀಲನೆ

ಮೈಸೂರು ಜುಲೈ,16,2025 (www.justkannada.in): ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ...

ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

ಬೆಂಗಳೂರು, ಜುಲೈ,16, 2025 (www.justkannada.in): ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ...

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಮೊದಲ ಸಭೆ ಯಶಸ್ವಿ:ಮಹತ್ವದ ಮಾಹಿತಿ ಹಂಚಿಕೊಂಡ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in): ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ...

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ವಿಜಯಪುರ,ಜುಲೈ,16,2025 (www.justkannada.in): ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌...