5
March, 2026

A News 365Times Venture

5
Thursday
March, 2026

A News 365Times Venture

JK EXCLUSIVE: ಕಾಲ್ತುಳಿತ ದುರ್ಘಟನೆ ಬೆನ್ನಲ್ಲೇ  ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿದೇಶಕ್ಕೆ ತೆರಳಲು  ಸರಕಾರ ಗ್ರೀನ್ ಸಿಗ್ನಲ್ ..!

Date:

ಮೈಸೂರು, ಜೂ.11,2025: ಆರ್ಸಿಬಿ ವಿಜಯೋತ್ವಸದ ವೇಳೆ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ  ರಾಜ್ಯ ಗುಪ್ತಚರ ಇಲಾಖೆ ಮುಖ್ಯಸ್ಥರ ಹುದ್ದೆಯಿಂದ ವರ್ಗಾವಣೆಗೊಂಡ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್  ವಿದೇಶಕ್ಕೆ ತೆರಳಲು ರಾಜ್ಯ ಸರಕಾರ ಅನುಮತಿ ನೀಡಿದೆ.

ಆರ್ಸಿಬಿ ಅಭಿಮಾನಿಗಳು ಕಾಲ್ತುಳಿತದಿಂದ ಮೃತಪಟ್ಟ ದುರ್ಘಟನೆಯಿಂದ ರಾಜ್ಯ ಸರಕಾರ ತೀವ್ರ ಮುಜುಗರ ಅನುಭವಿಸುವಂತಾಯಿತು. ಸೂಮೋಟೊ ಪ್ರಕರಣ ದಾಖಲಿಸಿಕೊಂಡ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಚಾಟಿ ಬೀಸಿತು. ಇದರಿಂದ ಎಚ್ಚೆತ್ತುಕೊಂಡ ಸರಕಾರ ಕರ್ತವ್ಯ ಲೋಪದ ಮೇರೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿ ಐದು ಮಂದಿ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶಿಸಿತ್ತು.

ಆದರೆ ಪ್ರಕರಣದಲ್ಲಿ ಗುಪ್ತಚರ ಇಲಾಖೆ ವೈಫಲ್ಯವನ್ನು ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದರು, ಇಲಾಖೆ ಮುಖ್ಯಸ್ಥರಾಗಿದ್ದ ಹೇಮಂತ್ ನಿಂಬಾಳ್ಕರ್ ವಿರುದ್ಧ ಕ್ರಮಕ್ಕೆ ಮೀನಾಮೇಷ ಎಣಿಸಿದ್ದರು. ಸರಕಾರದ ಈ ನಿರ್ಧಾರದ ವಿರುದ್ಧ  ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣಗಳ ಮೂಲಕ ಅಭಿಪ್ರಾಯ ವ್ಯಕ್ತಪಡಿಸತೊಡಗಿದರು. ಎಚ್ಚೆತ್ತ ವಿಪಕ್ಷಗಳು ಗುಪ್ತಚರ ಇಲಾಖೆ ಮುಖ್ಯಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದವು. ಕಡೆಗೆ ಸರಕಾರ ಹೇಮಂತ್ ನಿಂಬಾಳ್ಕರ್ ಅವರನ್ನು  ಗುಪ್ತಚರ ಇಲಾಖೆಯಿಂದ ವರ್ಗಾವಣೆ ಮಾಡಿ ಕೈತೊಳೆದುಕೊಂಡಿತು.

ಸುಣ್ಣ- ಬೆಣ್ಣೆ:

ಸರಕಾರದ ಈ ಕ್ರಮದ ವಿರುದ್ಧ ಮತ್ತೆ ವ್ಯಾಪಕ ಅಸಮಧಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಯಿತು. ನಗರ ಪೊಲೀಸ್ ಆಯುಕ್ತ ದಯಾನಂದ್ ಅವರನ್ನು ಅಮಾನತುಗೊಳಿಸಿದ ಸರಕಾರ ನಿಂಬಾಳ್ಕರ್ ಅವರ ವಿರುದ್ಧ ಯಾಕೆ ಶಿಸ್ತು ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಪ್ರಶ್ನಿಸತೊಡಗಿದರು. ವಿಪಕ್ಷಗಳು ಸಹ ಇದಕ್ಕೆ ದನಿಗೂಡಿಸಿ ನಿಂಬಾಳ್ಕರ್ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯಿಸಿದ್ದವು.

ಮಂಗಳವಾರ ಕೋರ್ಟ್ ನಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ ಡಿಎನ್ಎ ಪರ ವಕೀಲರು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ಗುಪ್ತಚರ ಇಲಾಖೆ ಮುಖ್ಯಸ್ಥರಾಗಿದ್ದ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್   ಅವರನ್ನು ಬಂಧಿಸಿಲ್ಲ ಏಕೆ..? ಎಂದು ನ್ಯಾಯಪೀಠವನ್ನು ಪ್ರಶ್ನಿಸಿದ್ದರು. ಇಷ್ಟೆಲ್ಲಾ ಬೆಳಗಳಿಗೆಗಳ ಬಳಿಕವೂ ರಾಜ್ಯ ಸರಕಾರ ಹೇಮಂತ್ ನಿಂಬಾಳ್ಕರ್ ಅವರನ್ನು ವಿದೇಶಕ್ಕೆ ತೆರಳಲು ಅನುಮತಿ ನೀಡಿರುವುದು ಮತ್ತೊಂದು ವಿವಾದಕ್ಕೆ ಎಡೆಮಾಡಿದೆ.

ಜೂ.12 ರಿಂದ 27 ರ ವರೆಗೆ ಒಟ್ಟು 16 ದಿನಗಳ ಗಳಿಕೆ ರಜೆ ಮಂಜೂರು ಮಾಡಲಾಗಿದೆ.  ಈ ಅವಧಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರ ಹುದ್ದೆಗೆ ಐಎಎಸ್ ಅಧಿಕಾರಿ ನಾಗೇಂದ್ರ ಪ್ರಸಾದ್ ಅವರನ್ನು  ಸಮವರ್ತಿತ ಪ್ರಭಾರಿಯನ್ನಾಗಿ  ನೇಮಕ ಮಾಡಲಾಗಿದೆ.

key words:  Government,  green signal, IPS officer Hemant Nimbalkar, travel abroad, stampede .

vtu

SUMMARY:

Government gives green signal to IPS officer Hemant Nimbalkar to travel abroad in the wake of the stampede incident..!

The state government has granted permission to IPS officer Hemant Nimbalkar, who was transferred from the post of state intelligence chief in the wake of the stampede that killed 11 people during RCB’s victory, to travel abroad.

 

 

 

 

 

 

 

 

The post JK EXCLUSIVE: ಕಾಲ್ತುಳಿತ ದುರ್ಘಟನೆ ಬೆನ್ನಲ್ಲೇ  ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿದೇಶಕ್ಕೆ ತೆರಳಲು  ಸರಕಾರ ಗ್ರೀನ್ ಸಿಗ್ನಲ್ ..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರಿ ವೈದ್ಯರು ಮುಷ್ಕರ ಮಾಡಲ್ಲ ಎಂಬ ವಿಶ್ವಾಸವಿದೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,5,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರಯ ಮಾರ್ಚ್...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್...

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...