31
May, 2026

A News 365Times Venture

31
Sunday
May, 2026

A News 365Times Venture

KPCC ಅಧ್ಯಕ್ಷರಾಗಿ 6 ವರ್ಷ ಯಶಸ್ವಿ: ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

Date:

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿದ ಡಿಸಿಎಂ ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು. ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ದತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ ಮಾದರಿಯಾದುದು.

ವಿರೋಧ ಪಕ್ಷವಾದ ಬಿಜೆಪಿ ಸುಳ್ಳು ಕೇಸ್ ಗಳನ್ನು ಹಾಕಿ ಬಗೆಬಗೆಯ ಕಿರುಕಳ ನೀಡಿದರೂ ಶಿವಕುಮಾರ್ ಅವರು ಮಣಿಯದೆ ಪಕ್ಷಕ್ಕೆ ನಿಷ್ಠರಾಗಿ ಉಳಿದಿರುವುದು ಕಾಂಗ್ರೆಸ್ ಪಕ್ಷದ ಬಗ್ಗೆ ಅವರಲ್ಲಿರುವ ರಾಜಿಯಿಲ್ಲದ ನಿಷ್ಠೆಗೆ ಸಾಕ್ಷಿಯಾಗಿದೆ.. ಇದು ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಸ್ಪೂರ್ತಿದಾಯಕ ನಡವಳಿಕೆ ಆಗಿದೆ ಎಂದು ಬಣ್ಣಿಸಿದ್ದಾರೆ.

ಕೋಮುವಾದಿ ಶಕ್ತಿಗಳನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಜೊತೆಯಲ್ಲಿ ಡಿ.ಕೆ. ಶಿವಕುಮಾರ್ ಹಗಲಿರುಳು ದುಡಿದಿದ್ದಾರೆ. ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಮತ್ತೆ ಕಟ್ಟುವಲ್ಲಿ ಶಿವಕುಮಾರ್ ನನ್ನ ಹೆಗಲಿಗೆ ಹೆಗಲಾಗಿ ನಿಂತಿದ್ದಾರೆ.

ನನಗಿಂತ ಕಿರಿಯರಾದ ಶಿವಕುಮಾರ್ ಅವರಿಗೆ ಉಜ್ವಲವಾದ ರಾಜಕೀಯ ಭವಿಷ್ಯವಿದೆ.  2028ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದು ನಮ್ಮೆಲ್ಲರ ಬಯಕೆಯಾಗಿದೆ. ಇದಕ್ಕಾಗಿ ನಡೆಯುವ ಪಕ್ಷದ ಸಂಘಟನೆ ಮತ್ತು ಹೋರಾಟದಲ್ಲಿ ನಾನು ಕೂಡಾ ಜೊತೆಯಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Key words: CM Siddaramaiah, congratulates, DK Shivakumar, KPCC President

The post KPCC ಅಧ್ಯಕ್ಷರಾಗಿ 6 ವರ್ಷ ಯಶಸ್ವಿ: ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆಶಿ ಪದಗ್ರಹಣಕ್ಕೆ ಹೋಗಲು ತಯಾರಿ- ಶಾಸಕ ಸಿ.ಪಿಯೋಗೇಶ್ವರ್

ರಾಮನಗರ,ಮೇ,30,2026 (www.justkannada.in):  ರಾಜ್ಯದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್  ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ...

ಜೂ.3 ರಂದು ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ

ಬೆಂಗಳೂರು,ಮೇ,30,2026 (www.justkannada.in):  ಜೂನ್ 3 ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ...

ರಾಜ್ಯದಲ್ಲಿ ಮುಂದಿನ 2 ವರ್ಷ ‘ಸೂಪರ್ ಭ್ರಷ್ಟ ಸರ್ಕಾರ’- ಛಲವಾದಿ ನಾರಾಯಣಸ್ವಾಮಿ

ಯಾದಗಿರಿ,ಮೇ,30,2026 (www.justkannada.in): ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳ ಕಾಲ ಸೂಪರ್ ಭ್ರಷ್ಟ...

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ...