16
July, 2026

A News 365Times Venture

16
Thursday
July, 2026

A News 365Times Venture

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಸ್ಪೆಂಡ್: ರಾಜ್ಯಪಾಲರಿಂದ ಆದೇಶ

Date:

ಬೆಂಗಳೂರು, ಜುಲೈ, 13,2026 (www.justkannada.in):  ಗಂಭೀರ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕೆಪಿಎಸ್‌ಸಿ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಆದೇಶಿಸಿದ್ದಾರೆ.

ಶಿವಶಂಕರಪ್ಪ ಸಾಹುಕಾರ್ ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದು ಅಲ್ಲದೆ, ಶಿವಶಂಕರಪ್ಪ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಲು ರಾಜ್ಯಪಾಲರು ಶಿಫಾರಸು  ಮಾಡಿದ್ದಾರೆ.

ಜೊತೆಗೆ ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ ಉಲ್ಲೇಖಿಸುವ ಸಂಬಂಧ ರಾಷ್ಟ್ರಪತಿಗಳಿಗೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಅಥವಾ ಮುಂದಿನ ಆದೇಶ ಹೊರಬೀಳುವವರೆಗೆ ಕೆಪಿಎಸ್‌ಸಿಯ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲು ಆದೇಶದಲ್ಲಿ ತಿಳಿಸಲಾಗಿದೆ.

ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಸ್ವಜನಪಕ್ಷಪಾತ ಆರೋಪ ಕೇಳಿ ಬಂದಿದ್ದು ಈ ಕುರಿತು ದೂರುಗಳು ಸಲ್ಲಿಕೆಯಾಗಿದ್ದವು.  ಈ ದೂರಿನ ಆಧಾರದ ಮೇಲೆ ರಾಜ್ಯಪಾಲರು ಈ ಕ್ರಮ ಕೈಗೊಂಡಿದ್ದಾರೆ. ಇತ್ತೀಚೆಗೆ ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿ ವಿರುದ್ಧವೂ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ವೇಳೆ ನಕಲಿ ಆದಾಯ ಮತ್ತು ಜಾತಿ ಪ್ರಮಾಣಪತ್ರಗಳನ್ನು ಸಲ್ಲಿಸಿರುವ ಆರೋಪದ ಮೇಲೆ ಪ್ರಕರಣ ದಾಖಲಾಗಿದ್ದು, ದಾಖಲೆಗಳ ಪರಿಶೀಲನೆ ವೇಳೆ ಅಕ್ರಮ ಬೆಳಕಿಗೆ ಬಂದಿತ್ತು.

Key words: KPSC chairman, Shivshankarappa Sahukar, suspended, Governor, Order

The post KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಸ್ಪೆಂಡ್: ರಾಜ್ಯಪಾಲರಿಂದ ಆದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಂದು ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂ.:  ಗಂಭೀರ ಆರೋಪ ಮಾಡಿದ ಆರ್.ಅಶೋಕ್

ಬೆಂಗಳೂರು, ಜುಲೈ 14,2026 (www.justkannada.in): ಒಂದು ಸಚಿವ ಸ್ಥಾನಕ್ಕೆ 100ರಿಂದ 150...

ಮತ್ತೊಂದು ಬಹುಕೋಟಿ ವಂಚನೆ ಬಯಲು: ಗ್ರಾಹಕರಿಂದ ಹಣ ಸಂಗ್ರಹಿಸಿ ವಂಚಕರು ಪರಾರಿ

ಬೆಳಗಾವಿ,ಜುಲೈ,15,2026 (www.justkannada.in):  ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು...

ಸಂಪುಟ ವಿಸ್ತರಣೆ ಕಸರತ್ತು: ಇಂದು ದೆಹಲಿಗೆ ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜುಲೈ,15,2026 (www.justkannada.in): ಡಿ.ಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ ಒಂದು ತಿಂಗಳು ಕಳೆದಿದ್ದುಆಗಸ್ಟ್...

ದೇವೇಗೌಡರು ಮೇಕೆದಾಟು ಮಹದಾಯಿಗಾಗಿ ಮೋದಿಯವರ ಮುಂದೆ ಧರಣಿ ಮಾಡಲಿ- ಶಾಸಕ ಹೆಚ್ ಸಿ ಬಾಲಕೃಷ್ಣ

ಬೆಂಗಳೂರು,ಜುಲೈ,15,2026 (www.justkannada.in):  ಬಿಡದಿ ಟೌನ್ ಶಿಪ್ ವಿರೋಧಿಸಿ  ರೈತರ ಪರ ಧರಣಿ...