ಬೆಂಗಳೂರು,ಸೆಪ್ಟಂಬರ್,7,2026 (www.justkannada.in): ಕೆಪಿಎಸ್ ಸಿ ನೇಮಕಾತಿಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
ನಿರೀಕ್ಷಣಾ ಜಾಮೀನು ಕೋರಿ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಅವರಿದ್ದ ಪೀಠ ವಜಾಗೊಳಿಸಿದೆ.
ಹಾಗೆಯೇ ಶಿವಶಂಕರಪ್ಪ ಸಾಹುಕಾರ್ ಗೆ ತರಾಟೆಗೆ ತೆಗೆದುಕೊಂಡ ನ್ಯಾಯಪೀಠ, ನೀಟ್ ಪರೀಕ್ಷೆ ಅಕ್ರಮದಿಂದ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಕೃತ್ಯಗಳಿಂದ ಇತ್ತೀಚೆಗೆ ಪ್ರತಿಭಟನೆ ನಡೆದಿದೆ. ಹೀಗಾದ್ರೆ ಹಗಲು ರಾತ್ರಿ ಓದಿದವರ ಕಥೆ ಏನಾಗಬೇಕು? ಕೆಪಿಎಸ್ ಸಿ ಮೇಲೆ ಜನರ ವಿಶ್ವಾಸವೇ ಹೋಗಿದೆ. ನಿಮ್ಮ ಕುಟುಂಬದ ಸದಸ್ಯರೇ ಇದರಲ್ಲಿ ಭಾಗಿಯಾಗಿದ್ದಾರೆ. ಇದು ವ್ಯವಸ್ಥಿತ ಫ್ರಾಡ್ ಎಂದು ಕಿಡಿಕಾರಿ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ.
Key words: Former KPSC, chairman, Shivashankarappa Sahukar, anticipatory bail ,High court
The post KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




