8
March, 2026

A News 365Times Venture

8
Sunday
March, 2026

A News 365Times Venture

LPG ಸಿಲಿಂಡರ್ ದರ ಏರಿಕೆ: ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ-ಸಿಎಂ ಸಿದ್ದರಾಮಯ್ಯ ಕಿಡಿ

Date:

ಬೆಂಗಳೂರು,ಮಾರ್ಚ್,7,2026 (www.justkannada.in): ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ ಮತ್ತು ಬೆಲೆ ಏರಿಕೆಯಿಂದ ತತ್ತರಿಸಿಹೋಗಿರುವ ಸಮಯದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ‌ ಅವರ ಸರ್ಕಾರ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಿಸಿರುವುದು ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಗೃಹ ಬಳಕೆಯ ಸಿಲಿಂಡರ್‌ ಗಳ ಬೆಲೆಯನ್ನು ಸುಮಾರು ₹60ರಷ್ಟು ಹೆಚ್ಚಿಸಿರುವುದರಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಜೀವನನಿರ್ವಹಣೆಯ ವೆಚ್ಚ ದುಬಾರಿಯಾಗಲಿದೆ.

ಈ ಏರಿಕೆ ಅನಿವಾರ್ಯ ಕ್ರಮವೇನಲ್ಲ, ಇದು ಶರಣಾಗತಿಯನ್ನೇ ದೇಶದ ಕಾರ್ಯತಂತ್ರವೆಂದು ತಪ್ಪಾಗಿ ತಿಳಿದುಕೊಂಡ ವಿದೇಶಾಂಗ ನೀತಿಯ ಫಲವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಮಾತುಗಳಿಗೆ ಮೂಕರಂತೆ ತಲೆಯಾಡಿಸುವ ಮೂಲಕ ಭಾರತದ ವ್ಯೂಹಾತ್ಮಕ ಸ್ವಾತಂತ್ರ್ಯವನ್ನು ಬೇರೊಂದು ರಾಷ್ಟ್ರದ ಪಾದದಡಿ ಇಟ್ಟಿದ್ದಾರೆ ಮತ್ತು ರಷ್ಯಾ ಹಾಗೂ ಇರಾನ್‌ ನಂತಹ ದೇಶಗಳೊಂದಿಗಿನ ಭಾರತದ ದೀರ್ಘಕಾಲೀನ ಇಂಧನ ಸಹಭಾಗಿತ್ವವನ್ನು ಹಾಳುಗೆಡವಿದ್ದಾರೆ.  ಇವು ಹಲವು ದಶಕಗಳಿಂದ ಭಾರತೀಯರಿಗೆ ಇಂಧನ ಸ್ಥಿರತೆಯನ್ನು ಖಾತ್ರಿಪಡಿಸಿದ ರಾಷ್ಟ್ರಗಳು ಎಂಬುದನ್ನು ಪ್ರಧಾನಿಗಳು ಮರೆತಂತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಪಂಡಿತ್ ಜವಾಹರಲಾಲ್ ನೆಹರೂರವರ ಪ್ರಕಾರ “ವಿದೇಶಾಂಗ ನೀತಿಯು ಆರ್ಥಿಕ ನೀತಿಯ ಪರಿಣಾಮವಾಗಿದೆ.” ನೆಹರೂ ಅವರು ಏಳೆಂಟು ದಶಕಗಳ ಹಿಂದೆಯೇ ನೀಡಿದ್ದ ಎಚ್ಚರಿಕೆ ಇಂದು ಅಕ್ಷರಶಃ ಸತ್ಯವಾಗಿದೆ. ರಾಜತಾಂತ್ರಿಕತೆ ಎನ್ನುವುದು ಕಾರ್ಯತಂತ್ರವಾಗದೆ, ಪ್ರದರ್ಶನದ ವಸ್ತುವಾಗಿ ಮಾರ್ಪಟ್ಟಾಗ, ಅದಕ್ಕೆ ಅನಿವಾರ್ಯವಾಗಿ ಬಡವರು ಮತ್ತು ಮಧ್ಯಮ ವರ್ಗದ ಜನರು ಬಲಿಯಾಗುತ್ತಾರೆ.‌

ಇತ್ತೀಚೆಗೆ ತಮ್ಮ ಪುಸ್ತಕದಲ್ಲಿ ಮಾಜಿ ಸೇನಾಧಿಕಾರಿ ಜನರಲ್ ಎಂ.ಎಂ. ನರವಣೆ ಅವರು ಭಾರತದ ವಿದೇಶಾಂಗ ನೀತಿ ನಿರ್ಧಾರಗಳಲ್ಲಿ ಸಾಂಸ್ಥಿಕ ಸಮಾಲೋಚನೆ ಮತ್ತು ವ್ಯೂಹಾತ್ಮಕ ತಿಳುವಳಿಕೆಯ ಕೊರತೆಯ ಬಗ್ಗೆ ಗಂಭೀರ ಆತಂಕಗಳನ್ನು ಎತ್ತಿದ್ದರು. ಇದು ಪ್ರಧಾನಮಂತ್ರಿಗೆ ರಾಜತಾಂತ್ರಿಕ ನಿಲುವು ಮತ್ತು ಅದರ ಆರ್ಥಿಕ ಪರಿಣಾಮಗಳ ಮೂಲಭೂತ ತಿಳುವಳಿಕೆಯ ಕೊರತೆ ಇದೆ ಎಂಬ ಅನುಮಾನವನ್ನು ಖಚಿತಪಡಿಸುವಂತಿದೆ ಎಂದು ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಭಾರತದ ಇಂದಿನ ವಿದೇಶಾಂಗ ನೀತಿಯ ವೈಫಲ್ಯವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಫ್‌ ಸ್ಟೀನ್ ಫೈಲ್ಸ್‌ ನ ಬಗೆಗಿನ ಭಯ ಮತ್ತು ರಾಜತಾಂತ್ರಿಕ ತೀರ್ಮಾನಗಳಲ್ಲಿನ ಅಜ್ಞಾನವನ್ನು ತೋರುತ್ತದೆ. ಪ್ರಧಾನಿಗಳು ತಮ್ಮ ರಾಜತಾಂತ್ರಿಕ ವೈಫಲ್ಯಕ್ಕೆ ಕೋಟ್ಯಂತರ ಭಾರತೀಯರು ಯಾಕೆ ಬೆಲೆ ತೆರಬೇಕು ಎನ್ನುವುದನ್ನು ತಿಳಿಸಲಿ. ಜಾಗತಿಕ ಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿಯವರು ಬಹಿರಂಗವಾಗಿ ದೇಶದ ಜನರ ಕ್ಷಮೆಯಾಚಿಸಲಿ ಮತ್ತು ರಾಜೀನಾಮೆ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Key words: LPG cylinder, price, hike, CM, Siddaramaiah

The post LPG ಸಿಲಿಂಡರ್ ದರ ಏರಿಕೆ: ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ-ಸಿಎಂ ಸಿದ್ದರಾಮಯ್ಯ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಾಲ ಮಾಡದೆ ಅಭಿವೃದ್ಧಿ ಆಗಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in):  ಸಾಲದ ಬಗ್ಗೆ ಬಿಜೆಪಿಯವರು ಟೀಕೆ ಹಿನ್ನೆಲೆಯಲ್ಲಿ ಈ ಕುರಿತು...

ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಬೀದರ್,ಮಾರ್ಚ್,7,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು...

ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚಲ್ಲ- MLC ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in): ಟಿ.ನರಸೀಪುರದಲ್ಲಿ ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ...

ನಾಳೆ ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್..!

ಬೆಂಗಳೂರು,ಮಾರ್ಚ್,7,2026 (www.justkannada.in):  ಸಿಎಂ ಸಿದ್ದರಾಮಯ್ಯ ನಿನ್ನೆ 2026-27ನೇ ಸಾಲಿನ ರಾಜ್ಯ ಬಜೆಟ್...