ಬೆಂಗಳೂರು,ಫೆಬ್ರವರಿ,9,2026 (www.justkannada.in): ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ ಎಂಬ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಶಾಸಕ ಹೆಚ್.ಸಿ ಬಾಲಕೃಷ್ಣ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಶಾಸಕ ಹೆಚ್.ಸಿ ಬಾಲಕೃಷ್ಣ, ಇತ್ತೀಚಿನ ದಿನಗಳಲ್ಲಿ ಗೊಂದಲ ಜಾಸ್ತಿ ಆಗುತ್ತಿದೆ. ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಇದು ಸರಿಯಲ್ಲ ಕ್ಷೇತ್ರಕ್ಕೆ ಹೋದರೆ ಜನ ನಮ್ಮನ್ನ ಈ ಬಗ್ಗೆಯೇ ಪ್ರಶ್ನೆ ಮಾಡುತ್ತಾರೆ. ನಾಯಕತ್ವ ವಿಚಾರವಾಗಿ ಹೈಕಮಾಂಡ್ ಸ್ಪಷ್ಟವಾಗಿ ಹೇಳಬೇಕು ಎಂದು ಆಗ್ರಹಿಸಿದರು.
ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಪಕ್ಷಕ್ಕೆ ಗೊಂದಲ ಆಗುವ ಹೇಳಿಕೆ ಕೊಡಬಾರದು. ಯತೀಂದ್ರ ಹೇಳಿದ್ದಕ್ಕೆ ಯಾರು ಬದಲಾವಣೆ ಮಾಡದೆ ಸುಮ್ಮನಿರಲ್ಲ. ಯತೀಂದ್ರ ಹೇಳಿಲ್ಲ ಅಂದರೂ ಬದಲಾವಣೆ ನಿಲ್ಲಲ್ಲ ಹೀಗಾಗಿ ಪಕ್ಷಕ್ಕೆ ಮುಜುಗರ ತರುವ ಹೇಳಿಕೆಯನ್ನು ಯತೀಂದ್ರ ಸಿದ್ದರಾಮಯ್ಯ ನೀಡಬಾರದು ಎಂದು ಹೆಚ್.ಸಿ ಬಾಲಕೃಷ್ಣ ತಿಳಿಸಿದರು.
Key words: MLC, Yathindra, statements, MLA, H.C. Balakrishna
The post MLC ಯತೀಂದ್ರ ಪಕ್ಷಕ್ಕೆ ಮುಜುಗರ ತರುವ ಹೇಳಿಕೆ ನೀಡಬಾರದು- ಶಾಸಕ ಹೆಚ್.ಸಿ ಬಾಲಕೃಷ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




