7
March, 2026

A News 365Times Venture

7
Saturday
March, 2026

A News 365Times Venture

Mysore Dasara: ಗಜಪಯಣಕ್ಕೆ ಕ್ಷಣಗಣನೆ

Date:

ಮೈಸೂರು,ಆಗಸ್ಟ್,4,2025 (www.justkannada.in):  ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ  ಆಗಮಿಸುವ ಗಜಪಡೆಯನ್ನು ಸ್ವಾಗತಿಸುವ ಗಜಪಯಣಕ್ಕೆ ಕ್ಷಣಗಣನೆ ಆರಂಭವಾಗಿದೆ.

ಇಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲು ವೀರನಹೊಸಳ್ಳಿಯ ಬಳಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಮೊದಲ ಹಂತದ ಗಜಪಯಣಕ್ಕೆ ಚಾಲನೆ  ಸಿಗಲಿದೆ.  ಮಧ್ಯಾಹ್ನ 12.34 ಯಿಂದ 12.54ರ ತನಕ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ನೇತೃತ್ವದಲ್ಲಿ ಪೂಜೆ ಸಲ್ಲಿಕೆಯಾಗಲಿದೆ.

ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಮೊದಲ ಹಂತದಲ್ಲಿ ಅಭಿಮನ್ಯು, ಭೀಮ, ಕಂಜನ್, ಪ್ರಶಾಂತ್, ಮಹೇಂದ್ರ, ಏಕಲವ್ಯ, ಧನಂಜಯ್, ಕಾವೇರಿ, ಲಕ್ಷ್ಮೀ ಆನೆಗಳು ಮೈಸೂರಿಗೆ ಆಗಮಿಸಲಿವೆ. ವೀರನಹೊಸಹಳ್ಳಿಯಿಂದ ಮೈಸೂರಿನ ಅರಣ್ಯ ಭವನಕ್ಕೆ ಬರಲಿರುವ ಗಜಪಡೆ ಬಳಿಕ 2 ದಿನಗಳ ವಿಶ್ರಾಂತಿ ಪಡೆಯಲಿದ್ದು ನಂತರ ಆಗಸ್ಟ್ 7 ರಂದು ಅರಮನೆ ಆವರಣಕ್ಕೆ ಆಗಮಿಸಲಿವೆ. ಈ ಬಾರಿಯೂ ಕ್ಯಾಪ್ಟನ್ ಅಭಿಮನ್ಯು  ಜಂಬೂ ಸವಾರಿ ಮೆರವಣಿಗೆಯಲ್ಲಿ ಅಂಬಾರಿ ಹೊರಲಿದ್ದಾನೆ.

Key words: Mysore Dasara,  Countdown, Gajapayana

The post Mysore Dasara: ಗಜಪಯಣಕ್ಕೆ ಕ್ಷಣಗಣನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಚರ್ಚೆ ನಡುವೆ...

ಸಿಎಂರಿಂದ ಒಳ್ಳೆಯ ಬಜೆಟ್: ಕೇಂದ್ರ ಸಹಕಾರ ನೀಡುತ್ತಿಲ್ಲ- ಸಚಿವ ಎನ್.ಎಸ್ ಬೋಸರಾಜು

ಕಲಬುರುಗಿ,ಮಾರ್ಚ್,7,2026 (www.justkannada.in): ನಿನ್ನೆ ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್...

ರಾಜ್ಯ ಬಜೆಟ್: ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ ಬಳಕೆ

ಬೆಂಗಳೂರು,ಮಾರ್ಚ್,6,2026 (www.justkannada.n): ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ...

ಸಿಎಂ ಬಜೆಟ್ ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ- ಸಚಿವ ಎಂ. ಬಿ ಪಾಟೀಲ್ ಹರ್ಷ

ಬೆಂಗಳೂರು,ಮಾರ್ಚ್,6,2026 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 17ನೇ ಬಜೆಟ್...