15
July, 2025

A News 365Times Venture

15
Tuesday
July, 2025

A News 365Times Venture

NDA-BJP ಸರ್ಕಾರದ ಸಚಿವರುಗಳು ನಮ್ಮ ಬಳಿ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚಿಸಿದ್ದು ಏಕೆ..? ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಮಾರ್ಚ್,17,2025 (www.justkannada.in): ರಾಜ್ಯದಲ್ಲಿ ಜಾರಿಯಾಗಿರುವ  ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸುವ ಬಿಜೆಪಿ ನಾಯಕರಿಗೆ ನೇರಾನೇರ ಪ್ರಶ್ನೆ ಹಾಕಿರುವ ಸಿಎಂ ಸಿದ್ದರಾಮಯ್ಯ, NDA-BJP ಸರ್ಕಾರದ ಸಚಿವರುಗಳು, ಅಧಿಕಾರಿಗಳು ನಮ್ಮಲ್ಲಿಗೆ ಬಂದು ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚಿಸಿ ಹೋಗಿದ್ದಾರೆ.  ಗ್ಯಾರಂಟಿಗಳ ಬಗ್ಗೆ ನಮ್ಮ ಬಳಿ ಚರ್ಚಿಸಿದ್ದು ಏಕೆ? ಎಂದು ಕುಟುಕಿದರು.

ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳನ್ನು ನೀವು ಬಿಜೆಪಿ ಆಡಳಿತವಿರುವ  ರಾಜ್ಯಗಳಲ್ಲಿ ನಕಲು ಮಾಡಿದ್ದೀರಿ. ವಿರೋಧ ಮಾಡುವುದಾದರೆ  ನಕಲು ಏಕೆ ಮಾಡಬೇಕಿತ್ತು. ಸತ್ಯ ಯಾವಾಗಲೂ ಕಹಿಯಾಗಿರುತ್ತದೆ. ನಾವು ವಾಸ್ತವವನ್ನು ಹೇಳುತ್ತಿದ್ದೇವೆ. ದಿನಾಂಕ 3-1-2025 ರಂದು ಚಂದ್ರ ಬಾಬು ನಾಯ್ದು ಅವರ ಸರ್ಕಾರದ ಮಂತ್ರಿಗಳು ಹಾಗೂ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಕುರಿತು ಅಧ್ಯಯನ ಮಾಡಿ ಹೋಗಿದ್ದಾರೆ. ಸಚಿವ  ರಾಮಲಿಂಗಾರೆಡ್ಡಿ ಹಾಗೂ ನನ್ನನ್ನು ಭೇಟಿಯಾಗಿ ಚರ್ಚಿಸಿದ್ದಾರೆ.   2-2-2025 ರಂದು ಮಹಾರಾಷ್ಟ್ರದ ಸಾರಿಗೆ ಸಚಿವರಾದ ಪ್ರತಾಪ್ ಸರ್ನಾಯಕ್ ಶಕ್ತಿ ಯೋಜನೆ ಬಗ್ಗೆ ಚರ್ಚಿಸಿ ತೆರಳಿದ್ದಾರೆ. ಅಲ್ಲಿರುವುದು ಬಿಜೆಪಿ ಸರ್ಕಾರ.  5-3-2025 ರಂದು ಕೇರಳದಿಂದ ಸಚಿವರು ಬಂದು ಅಧ್ಯಯನ ಮಾಡಿ ಹೋದರು. ಇವರೆಲ್ಲಾ ಸುಮ್ಮನೆ ಬಂದು ಹೋಗುತ್ತಾರೆಯೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು.

ಕೇಂದ್ರ ಸರ್ಕಾರದ Indian institute of Public Administration ಸಂಸ್ಥೆಯ ಅಧ್ಯಕ್ಷರಾದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಸಚಿವ  ಜಿತೇಂದ್ರ ಸಿಂಗ್  ಪ್ರಶಂಸೆಯ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕೊಟ್ಟಿದ್ದಾರೆ. ಈ ಎರಡೂ ವರದಿಗಳು ಸರ್ಕಾರಕ್ಕೆ ಉಪಯುಕ್ತವಾಗಿದ್ದರೂ ಮೊಸರಲ್ಲಿ ಕಲ್ಲು ಹುಡುಕುತ್ತಿದ್ದೀರಿ.  ನಿಮಗೆ ಎಷ್ಟು ಹುಡುಕಿದರೂ ಮೊಸರಲ್ಲಿ ಕಲ್ಲು ಸಿಗುವುದಿಲ್ಲ. ನೀವು ಮಾಡುತ್ತಿರುವುದು ಇದೊಂದು ರಾಜಕೀಯ ಪ್ರೇರಿತ ಕೆಲಸ. ಈಗಲಾದರೂ ಸಕಾರಾತ್ಮಕವಾಗಿ ಟೀಕೆ ಮಾಡಬೇಕೆಂದು ಸಿಎಂ ಮನವಿ ಮಾಡಿದರು.

ತಪ್ಪುಗಳಿದ್ದರೆ ಸರ್ಕಾರದ ಖಜಾನೆಗೆ ತೊಂದರೆಯಿದ್ದಾರೆ ಸರ್ಕಾರದ ಗಮನಕ್ಕೆ ತರುವುದು ವಿರೋಧಪಕ್ಷದ ಕೆಲಸ. ಆ ಕೆಲಸ ಮಾಡಬೇಕು.  ಗ್ಯಾರಂಟಿ ಯೋಜನೆಗಳಿಗೆ ಫೆಬ್ರವರಿ ವರೆಗೆ ನಾವು, ನಮ್ಮ ಸರ್ಕಾರ ಬರೋಬ್ಬರಿ 76,509 ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಇದು ಸತ್ಯ ಎನ್ನುವುದು ಸದನದಲ್ಲಿರುವ ಪ್ರತಿಯೊಬ್ಬರಿಗೂ ಸ್ಪಷ್ಟವಾಗಿ ಗೊತ್ತಿದೆ. ನಮ್ಮ ಸರ್ಕಾರ ದಿವಾಳಿಯಾಗಿದ್ದರೆ 76509 ಕೋಟಿ ಕೊಡಲು ಸಾಧ್ಯವಿತ್ತೆ ಎಂದು ಪ್ರಶ್ನಿಸಿದರು.

ಲೋಕಸಭೆ ಗ್ಯಾರಂಟಿ ನಿಲ್ಲುತ್ತೆ ಎಂದಿದ್ರಿ: ನಿಂತೋಯ್ತೇನ್ರಿ..!

ಹಾಗೆಯೇ ಲೋಕಸಭಾ ಚುನಾವಣೆ ನಂತರದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ನಿಲ್ಲಿಸಿಬಿಡತ್ತೆ ಎಂದು ಸುಳ್ಳು ಆರೋಪ, ಅಪಪ್ರಚಾರ ಮಾಡಿದ್ರಲ್ಲಾ,  ನಿಂತೋಯ್ತೇನ್ರೀ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಲೋಕಸಭಾ ಚುನಾವಣೆ ನಂತರದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಸುಳ್ಳು ಆರೋಪ, ಅಪಪ್ರಚಾರ ಮಾಡಿದಿರಿ. ಜನರಿಗೆ ಈ ಕಾರ್ಯಕ್ರಮಗಳ ಸತ್ಯಾಸತ್ಯತೆ ಗೊತ್ತಿದೆ. ಫಲಾನುಭವಿಗಳಿಗೆ ಇದರಿಂದ ಪ್ರಯೋಜನವಾಗಿದೆ. ಜೂನ್ 11, 2023 ರಿಂದ 410 ಕೋಟಿ ಜನ ಶಕ್ತಿ ಯೋಜನೆಯಡಿ ಓಡಾಡಿದ್ದಾರೆ. ನೀವು ಎಷ್ಟೇ ಸುಳ್ಳು ಹೇಳಿದರೂ ಉಪಚುನಾವಣೆಯಲ್ಲಿ ಮೂರು ಸ್ಥಾನಗಳನ್ನು ಸೋತಿದ್ದೀರಿ.   ನಿಮ್ಮ ಟೀಕೆ, ಆಪಾದನೆಗಳು ಮಾಡಿದ ನಂತರ ಉಪಚುನಾವಣೆಗಳು ನಡೆದಿವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ  ಗೆದ್ದಿದ್ದ ಚನ್ನಪಟ್ಟಣ ಕ್ಷೇತ್ರದಲ್ಲಿ 25 ಸಾವಿರಕ್ಕೂ ಹೆಚ್ಚು ಅಂತರದಿಂದ ಗೆದ್ದಿದ್ದೇವೆ. ಶಿಗ್ಗಾಂವಿ ಕ್ಷೇತ್ರದಲ್ಲಿ13 ಸಾವಿರ ಅಂತರದಿಂದ ಹಾಗೂ ಸಂಡೂರು ಕ್ಷೇತ್ರದಲ್ಲಿ 9 ಸಾವಿರ ಅಂತರದಲ್ಲಿ ಗೆದ್ದಿದ್ದೇವೆ.   ಮೂರೂ  ಕಡೆ ಮಕಾಡೆ ಮಲಗಿದಿರಿ ನೀವು. ಜನರನ್ನು ಮೂರ್ಖರನ್ನಾಗಿಸಲು ಪ್ರಯತ್ನಿಸಿದರೆ ಸಾಧ್ಯವಿಲ್ಲ ಎಂದರು.

ಎರಡು ಬಾರಿ ಅಧಿಕಾರ ಮಾಡಿರುವ ನೀವು ಜನರ ಆಶೀರ್ವಾದದಿಂದ ಗೆದ್ದಿದ್ದೀರೇ? ಆಪರೇಶನ್ ಕಮಲ ಮಾಡಿ 18 ಕ್ಷೇತ್ರಗಳನ್ನು ಗೆದ್ದಿರಿ ಎಂದು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರನ್ನು ಟೀಕಿಸಿದರು.

ಬಸವರಾಜ ಬೊಮ್ಮಾಯಿ ಅವರ ಮಗನ ವಿರುದ್ಧ ಗೆಲ್ಲಬೇಕಾದರೆ ಎಲ್ಲಾ ಜಾತಿ ಜನರು ಮತ ನೀಡಿದ್ದರಿಂದ ನಾವು ಗೆದ್ದಿದ್ದೇವೆ. ನಾವು ಅಪರೇಶನ್ ಕಾಂಗ್ರೆಸ್ ಮಾಡಿಲ್ಲ.  ನಾವು ಗ್ಯಾರಂಟಿ ಕೊಡದೇ ಹೋಗಿದ್ದರೆ ಬಡವರು ಮತ ಹಾಕುತ್ತಿರಲಿಲ್ಲ . ಮಧ್ಯವರ್ತಿಗಳಿಲ್ಲದೇ  ನೇರವಾಗಿ  ಫಲಾನುಭವಿಗಳ ಖಾತೆಗೆ ತಲುಪುವ ಈ ಯೋಜನೆಗಳು ಬಡವರ ಬದುಕಿಗೆ ಭರವಸೆ ನೀಡಿವೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

Key words: ministers, NDA-BJP government, discuss, guarantee schemes, CM Siddaramaiah

The post NDA-BJP ಸರ್ಕಾರದ ಸಚಿವರುಗಳು ನಮ್ಮ ಬಳಿ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚಿಸಿದ್ದು ಏಕೆ..? ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಿಗೆ ಭೇಟಿ: ವಿಶೇಷ ಮಕ್ಕಳೊಂದಿಗೆ ಸಂತಸದ ಕ್ಷಣ ಹಂಚಿಕೊಂಡ ಬಾಲಿವುಡ್ ನಟ

ಮೈಸೂರು,ಜುಲೈ,15,2025 (www.justkannada.in): ಬಾಲಿವುಡ್ ನಟ ಗುರುಪಾಲ್ ಸಿಂಗ್ ಅವರು ಇಂದು ಅಣುವ್ರತ...

‘ವೈದ್ಯರನ್ನ ಬದಲಾಯಿಸಿ, ಇಲ್ಲಾಂದ್ರೆ ಆಸ್ಪತ್ರೆ ಮುಚ್ಚಿ’: ರೋಗಿಗಳ ಪ್ರತಿಭಟನೆ, ಆಕ್ರೋಶ

ಮೈಸೂರು,ಜುಲೈ,15,2025 (www.justkannada.in): ಮೈಸೂರಿನಲ್ಲಿ ವೈದ್ಯರೊಬ್ಬರ ವರ್ತನೆಯಿಂದ ಬೇಸತ್ತ ರೋಗಿಗಳು ವೈದ್ಯರ  ವಿರುದ್ಧವೇ...

ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ..? ಸರ್ಕಾರದ ವಿರುದ್ದ ಗುಡುಗಿದ ಬಿಜೆಪಿ ವಕ್ತಾರ

ಮೈಸೂರು,ಜುಲೈ,15,2025 (www.justkannada.in): ಜುಲೈ 19ಕ್ಕೆ ಮೈಸೂರಿನಲ್ಲಿ ಸಾಧನಾ ಸಮಾವೇಶಕ್ಕೆ ಮುಂದಾಗಿರುವ ರಾಜ್ಯ...

ರೈತರ ಜಮೀನು ಭೂ ಸ್ವಾಧೀನ ಕೈ ಬಿಟ್ಟ ಸರಕಾರ: ಸಿಎಂ ಘೋಷಣೆ.

ಬೆಂಗಳೂರು,ಜುಲೈ,15,2025 (www.justkannada.in): ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರವು  ದೇವನಹಳ್ಳಿ ತಾಲೂಕು...