ಪುಣೆ,ಮೇ,13,2026 (www.justkannada.in): ದೇಶಾದ್ಯಂತ ಭಾರೀ ಸುದ್ದಿಯಾಗಿರುವ ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಮನೀಷಾ ವಾಘ್ಮೋರೆ ಬಂಧಿತ ಆರೋಫಿ, ಮಹಾರಾಷ್ಟ್ರ ಪುಣೆಯಲ್ಲಿ ಆರೋಪಿಯ ಬಂಧನವಾಗಿದೆ. ಸಿಬಿಐ ಪುಣೆ ಅಪರಾಧ ವಿಭಾಗ ಪೊಲೀಸರು ಕಾರ್ಯಾಚರಣೆ ನಡೆಸಿ ಮನೀಷಾ ವಾಘ್ಮೋರೆಯನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಈವರೆಗೆ ಮೂವರ ಬಂಧನವಾಗಿದ್ದು ಸಿಬಿಐ ತನಿಖೆ ಮುಂದುವರೆಸಿದೆ. ರಾಜಸ್ತಾನದಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಹೀಗಾಗಿ ನೀಟ್ ಪರೀಕ್ಷೆಯನ್ನ ರದ್ದುಗೊಳಿಸಿರುವ ಕೇಂದ್ರ ಸರ್ಕಾರ ಶೀಘ್ರವೇ ಪರೀಕ್ಷೆಗೆ ಹೊಸ ದಿನಾಂಕ ನಿಗದಿ ಮಾಡುವುದಾಗಿ ತಿಳಿಸಿದೆ.
Key words: NEET, question paper, leak case, Another, accused, arrested
The post NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




