30
July, 2025

A News 365Times Venture

30
Wednesday
July, 2025

A News 365Times Venture

RCB ಸಂಭ್ರಮಾಚರಣೆ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತಕ್ಕೆ  8 ಅಭಿಮಾನಿಗಳು ಸಾವು

Date:

ಬೆಂಗಳೂರು, ಜೂನ್​ 04,2025 (www.justkannada.in):  18ನೇ ಆವೃತ್ತಿಯ ಐಪಿಎಲ್  ಟ್ರೋಫಿ ಗೆದ್ದು ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಬೆಂಗಳೂರಿಗೆ ಆಗಮಿಸಿದ್ದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಗೆ ಸಜ್ಜಾಗಿದೆ. ಈ ಮಧ್ಯೆ ಕ್ರೀಡಾಂಗಣದ ಬಳಿ ಸಾವಿರಾರು ಮಂದಿ ಅಭಿಮಾನಿಗಳು ನೆರೆದಿದ್ದು ಭೀಕರ ಕಾಲ್ತುಳಿತ ಉಂಟಾಗಿ  8 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಆರ್ ಸಿಬಿ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದು, ಈ ವೇಳೆ ಕಾಲ್ತುಳಿತ ಸಂಭವಿಸಿ ಓರ್ವ ಮಹಿಳೆ ಸೇರಿ 8 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ. ಎಂಬ ಮಾಹಿತಿ ಲಭ್ಯವಾಗಿದೆ. ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ​ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು 10 ಮಂದಿ ಅಭಿಮಾನಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೌರಿಂಗ್​ ಆಸ್ಪತ್ರೆ ಎದುರು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಟೇಡಿಯಂ ಹೊರಗೂ ಜನಸಾಗರವೇ ಸೇರಿದ್ದು ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲಾಗದೆ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಹಾಗೆಯೇ ನಿಮ್ಮ ಪ್ರಾಣ ಮುಖ್ಯ ಎಲ್ಲರೂ ಮನೆಗೆ ತೆರಳಿ ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.vtu

Key words: RCB, Celebration, 7 fans, death, Chinnaswamy Stadium

The post RCB ಸಂಭ್ರಮಾಚರಣೆ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತಕ್ಕೆ  8 ಅಭಿಮಾನಿಗಳು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ- ಸಚಿವ ದಿನೇಶ್ ಗುಂಡೂರಾವ್‍

ಕಾರವಾರ,ಜುಲೈ,30,2025 (www.justkannada.in): ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ...

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...