ಬೆಂಗಳೂರು, ಜೂನ್ 04,2025 (www.justkannada.in): 18ನೇ ಆವೃತ್ತಿಯ ಐಪಿಎಲ್ ಟ್ರೋಫಿ ಗೆದ್ದು ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಬೆಂಗಳೂರಿಗೆ ಆಗಮಿಸಿದ್ದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಗೆ ಸಜ್ಜಾಗಿದೆ. ಈ ಮಧ್ಯೆ ಕ್ರೀಡಾಂಗಣದ ಬಳಿ ಸಾವಿರಾರು ಮಂದಿ ಅಭಿಮಾನಿಗಳು ನೆರೆದಿದ್ದು ಭೀಕರ ಕಾಲ್ತುಳಿತ ಉಂಟಾಗಿ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಆರ್ ಸಿಬಿ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದು, ಈ ವೇಳೆ ಕಾಲ್ತುಳಿತ ಸಂಭವಿಸಿ ಓರ್ವ ಮಹಿಳೆ ಸೇರಿ 8 ಮಂದಿ ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ. ಎಂಬ ಮಾಹಿತಿ ಲಭ್ಯವಾಗಿದೆ. ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು 10 ಮಂದಿ ಅಭಿಮಾನಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೌರಿಂಗ್ ಆಸ್ಪತ್ರೆ ಎದುರು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಟೇಡಿಯಂ ಹೊರಗೂ ಜನಸಾಗರವೇ ಸೇರಿದ್ದು ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲಾಗದೆ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಹಾಗೆಯೇ ನಿಮ್ಮ ಪ್ರಾಣ ಮುಖ್ಯ ಎಲ್ಲರೂ ಮನೆಗೆ ತೆರಳಿ ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
Key words: RCB, Celebration, 7 fans, death, Chinnaswamy Stadium
The post RCB ಸಂಭ್ರಮಾಚರಣೆ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತಕ್ಕೆ 8 ಅಭಿಮಾನಿಗಳು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.