ಬೆಂಗಳೂರು, ಜುಲೈ, 24,2025 (www.justkannada.in): ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಸಿಬಿ, ಇವೆಂಟ್ ಮ್ಯಾನೇಜ್ ಮೆಂಟ್ ಕಂಪನಿ ಡಿಎನ್ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಕಾಲ್ತುಳಿತ ಘಟನೆ ಸಂಬಂಧ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ಸಲ್ಲಿಸಿದ್ದ ವರದಿ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಆರ್ಸಿಬಿ, ಡಿಎನ್ ಎ, ಕೆಎಸ್ ಸಿಎ ವಿರುದ್ದ ಕ್ರಿಮಿನಲ್ ಕೇಸ್ ದಾಖಲು ಹಾಗೂ ಪೊಲೀಸರ ವಿರುದ್ಧ ಇಲಾಖಾ ತನಿಖೆ ನಡೆಸಲು ನಿರ್ಣಯ ಕೈಗೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ರಘುರಾಮ್ ಭಟ್, ಮಾಜಿ ಕಾರ್ಯದರ್ಶಿ ಎ.ಶಂಕರ್, ಮಾಜಿ ಖಜಾಂಚಿ ಜಯರಾಂ, ಆರ್ಸಿಬಿ ತಂಡದ ರಾಜೇಶ್ ಮೆನನ್, ಡಿಎನ್ಎ ನೆಟ್ವರ್ಕ್ ಲಿಮಿಟೆಡ್ ಎಂಡಿ ವೆಂಕಟ್ ವರ್ಧನ್ , ಡಿಎನ್ಎ ನೆಟ್ವರ್ಕ್ ಲಿಮಿಟೆಡ್ ಉಪಾಧ್ಯಕ್ಷ ಸುನೀಲ್ ಮಾಥೂರ್ ಇವರಿಗೆ ಇದೀಗ ಸಂಕಷ್ಟ ಎದುರಾಗಲಿದೆ.
Key words: Cabinet, file, criminal case, against, RCB
The post RCB ವಿರುದ್ದ ಕ್ರಿಮಿನಲ್ ಕೇಸ್, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಕ್ಯಾಬಿನೆಟ್ ನಲ್ಲಿ ನಿರ್ಧಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.