9
July, 2026

A News 365Times Venture

9
Thursday
July, 2026

A News 365Times Venture

SIR : ಸಾರ್ವಜನಿಕರಿಗೆ ಸೂಕ್ತ ಮಾರ್ಗದರ್ಶನ, ಅರಿವು ಮೂಡಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

Date:

ಮೈಸೂರು, ಜುಲೈ 7,2026 (www.justkannada.in):  ಮೈಸೂರು ಜಿಲ್ಲೆಯ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಬಿಳಿಗೆರೆ, ವರುಣ ಹಾಗೂ ತಿ. ನರಸೀಪುರ ಪುರಸಭೆ ವ್ಯಾಪ್ತಿಯಲ್ಲಿ ಇಂದು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಬೂತ್ ಮಟ್ಟದ ಸಭೆ ನಡೆಯಿತು.

ನಗರಾಭಿವೃದ್ಧಿ ಸಚಿವ  ಡಾ. ಯತೀಂದ್ರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಕುರಿತು ಪಕ್ಷದ ಕಾರ್ಯಕರ್ತರಿಗೆ ಸಮಗ್ರ ಮಾಹಿತಿ ನೀಡಲಾಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು, ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಅಗತ್ಯ ಬದಲಾವಣೆಗಳನ್ನು ನಿಯಮಾನುಸಾರ ಮಾಡಿಸಿಕೊಳ್ಳಲು ಸಾರ್ವಜನಿಕರಿಗೆ ಸೂಕ್ತ ಮಾರ್ಗದರ್ಶನ ಮತ್ತು ಅರಿವು ಮೂಡಿಸುವಂತೆ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೆ, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಕ್ಷದ ಕಾರ್ಯಕರ್ತರು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಮತದಾನದ ಹಕ್ಕನ್ನು ಸಮರ್ಪಕವಾಗಿ ಚಲಾಯಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕರೆ ನೀಡಿದರು.

Key words: SIR, awareness, Minister, Yathindra Siddaramaiah, instructs

The post SIR : ಸಾರ್ವಜನಿಕರಿಗೆ ಸೂಕ್ತ ಮಾರ್ಗದರ್ಶನ, ಅರಿವು ಮೂಡಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯಶಸ್ಸಿಗೆ ಶಿಸ್ತು ಮತ್ತು ಅಣುಕು ಪರೀಕ್ಷೆಗಳು ಅತ್ಯಗತ್ಯ: ನಿತೀಶ್ ಪಾಟೀಲ್

ಮೈಸೂರು, ಜುಲೈ,7,2026 (www.justkannada.in): ಅಭ್ಯರ್ಥಿಗಳು ಮನೆಯಲ್ಲಿ ಎಷ್ಟೇ ಓದಿದರೂ ಪರೀಕ್ಷಾ ಕೇಂದ್ರದ...

ರಾಜಕೀಯ ಪ್ರೇರಿತ ದೂರುಗಳಿಗೆ ಚು.ಆಯೋಗ ಬೆಲೆ ಕೊಡಲ್ಲ-ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಜುಲೈ,7,2026 (www.justkannada.in): ರಾಜ್ಯ ಸರ್ಕಾರ ಎಸ್ ಐಆರ್ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ...

ಬರ ಪರಿಸ್ಥಿತಿ ನಿರ್ವಹಣೆ ನಿರ್ಲಕ್ಷ್ಯ ತೋರಿಸಿದ್ರೆ ಕ್ರಮ- ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

ಕಲಬುರುಗಿ,ಜುಲೈ,7,2026 (www.justkannada.in):  ಬರ ಪರಿಸ್ಥಿತಿ ನಿರ್ವಹಣೆ ನಿರ್ಲಕ್ಷ್ಯ ತೋರಿಸಿದರೇ ಕ್ರಮ ಕೈಗೊಳ್ಳಲಾಗುತ್ತದೆ...

ವಯನಾಡಿನಲ್ಲಿ ಭೀಕರ  ಗುಡ್ಡ ಕುಸಿತ; ಮೂವರು ಸಾವು

ವಯನಾಡ್​,ಜುಲೈ,7,2026 (www.justkannada.in):  ಕೇರಳದ ವಯನಾಡ್ ಜಿಲ್ಲೆಯಲ್ಲಿ ನಡೆಯುತ್ತಿರುವ ಟ್ವಿನ್-ಟನಲ್ ಯೋಜನಾ ಕಾಮಗಾರಿ...