18
July, 2025

A News 365Times Venture

18
Friday
July, 2025

A News 365Times Venture

Sri Chamarajendra Zoological Gardens : ಕಡೆಗೂ ಬದುಕಲಿಲ್ಲ ಹೆಣ್ಣು ಒರಾಂಗೂಟಾನ್  “ಮಿನ್ನಿ”..!

Date:

ಮೈಸೂರು, ಏ.03,2025: ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದ ಸುಮಾರು 10 ವರ್ಷ 8 ತಿಂಗಳು ವಯಸ್ಸಿನ “ಮಿನ್ನಿ” ಹೆಣ್ಣು ಒರಾಂಗೂಟಾನ್ ಮೃತ.

ಪ್ರಾಣಿ ವಿನಿಮಯ ಕಾರ್ಯಕ್ರಮದಡಿ 2021 ರಲ್ಲಿ ಮಲೇಷಿಯಾ ಮೃಗಾಲಯದಿಂದ ಆಮದು ಮಾಡಿಕೊಂಡ ನಂತರ ಸುಮಾರು 4 ವರ್ಷಗಳ ಅವಧಿಯವರೆಗೆ ಮೈಸೂರು ಮೃಗಾಲಯದಲ್ಲಿ ಪ್ರದರ್ಶನಕ್ಕಿಡಲಾಗಿತ್ತು. ‘ಮಿನ್ನಿ’ಯು ಶ್ವಾಸಕೋಶ ರೋಗದ ಹಿನ್ನೆಲೆಯಲ್ಲಿ ಆಗಾಗ ಉಸಿರಾಟದ ತೊಂದರೆಯಿಂದ ಬಳಲುತಿತ್ತು. ಚಿಕಿತ್ಸೆಗೆ ಫಲಿಸದೆ ಮಿನ್ನಿ ಮೃತ.

ಮೈಸೂರು ಮೃಗಾಲಯದ ತಜ್ಞ ಪಶುವೈದ್ಯರಿಂದ ಮೃಗಾಲಯದ ಪರೀಕ್ಷಾ ಕೊಠಡಿಯಲ್ಲಿ ಮರಣೋತ್ತರ ಪರೀಕ್ಷೆ  ನಡೆಸಲಾಗಿದ್ದು, ಮಿನ್ನಿಯು ವ್ಯಾಪಕ ಹರಡಿದ ನ್ಯುಮೋನಿಯಾ ರೋಗಕ್ಕೆ ತುತ್ತಾಗಿ ಸಾವನ್ನಪ್ಪಿರುವುದಾಗಿ ಪಶುವೈದ್ಯರು ದೃಢಪಡಿಸಿದ್ದಾರೆ.

ಯುನೈಟೆಡ್ ಕಿಂಗ್‌ಡಮ್ ಮತ್ತು ಮಲೇಷಿಯಾ ದೇಶಗಳ ಪಶುವೈದ್ಯ ತಜ್ಞರ ಮಾರ್ಗದರ್ಶನ ಮತ್ತು ಬೆಂಬಲದೊಂದಿಗೆ ಮೈಸೂರು ಮೃಗಾಲಯದ ಪಶುವೈದ್ಯರ ತಂಡದ ನಿರಂತರ ಪ್ರಯತ್ನಗಳ ನಡುವೆಯೂ ಮಿನ್ನಿಯ ಆರೋಗ್ಯ ಸ್ಥಿತಿಯು ಗಂಭೀರವಾಗಿತ್ತು. ಮೃಗಾಲಯವು ಮಿನ್ನಿಯ ಆರೋಗ್ಯ ಸುಧಾರಣೆಗೆ ಸಾಧ್ಯವಿರುವ ಎಲ್ಲಾ ಬಗೆಯ ಚಿಕಿತ್ಸಾ ಶಿಷ್ಠಾಚಾರಗಳನ್ನು ಅನುಸರಿಸಿರುವುದು ಮಾತ್ರವಲ್ಲದೆ ಮಿನ್ನಿಯ ಚೇತರಿಕೆಗೆ ತೀವ್ರ ನಿಗಾ ವಹಿಸಲಾಗಿತ್ತು ಎಂದು ಮೃಗಾಲಯದ ಪ್ರಕಟಣೆ ಸ್ಪಷ್ಟಪಡಿಸಿದೆ.

ಮಿನ್ನಿಯ ಅನಾರೋಗ್ಯದ ಮೂಲ ಕಾರಣಗಳನ್ನು ಅರಿಯುವ ಉದ್ದೇಶದಿಂದ ಹೆಚ್ಚಿನ ತನಿಖೆಗಾಗಿ ಅದರ ಜೈವಿಕ ಮಾದರಿಗಳನ್ನು ಸುಧಾರಿತ ಪ್ರಯೋಗಾಲಯಗಳಿಗೆ ಪರೀಕ್ಷೆಗಾಗಿ ಕಳುಹಿಸಲಾಗಿದೆ ಹಾಗೂ ದೃಢೀಕೃತ ರೋಗ ನಿರ್ಣಯದ ವರದಿಯ ನಿರೀಕ್ಷೆಯಲ್ಲಿರುತ್ತದೆ. ಕಾಯಲಾಗಿದೆ. ಸದರಿ ದೃಢೀಕೃತ ರೋಗ ನಿರ್ಣಯ ಪರೀಕ್ಷಾ ವರದಿಗಳು ಅಥವ ಸಂಶೋಧನೆಗಳು ಒರಾಂಗೂಟಾನ್ ಪ್ರಾಣಿಗಳಿಗೆ ಸಂಭವಿಸಬಹುದಾದ ಉಸಿರಾಟ ಕಾಯಿಲೆಯ ಬಗ್ಗೆ ಹೆಚ್ಚಿನ ತಿಳುವಳಿಕೆಯನ್ನು ಹೊಂದಲು ಸಹಾಯಕವಾಗಲಿದೆ ಹಾಗೂ ಭವಿಷ್ಯದಲ್ಲಿ ವನ್ಯಜೀವಿಗಳ ಆರೋಗ್ಯ ನಿರ್ವಹಣೆಗೆ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

key words: Mysuru Zoo, Mourns, Loss of Minnie, the female Orangutan

SUMMARY:

Sri Chamarajendra Zoological Gardens, Mysuru

Mysuru Zoo Mourns the Loss of Minnie, the female Orangutan

With deep sorrow, Mysuru Zoo announces the passing of Minnie, the 10 years 8 months old female orangutan, on the night of April 2, 2025. Minnie, who had been housed at Mysuru Zoo for the past four years after being brought from Malaysia Zoo on 2nd April, 2021 under animal exchange program, had been battling recurrent respiratory illness.

A post-mortem examination conducted on 3/4/2025 at 10.00 a.m. at Mysuru Zoo P.M. Hall by specialist veterinarians of Mysuru Zoo, confirmed that Minnie succumbed to extensive bilateral pneumonia. Despite the relentless efforts of the Mysuru Zoo veterinary team, supported by expert guidance from veterinarians in the United Kingdom and Malaysia, her condition remained critical. The zoo had followed all possible treatment protocols and provided intensive care to aid her recovery

The post Sri Chamarajendra Zoological Gardens : ಕಡೆಗೂ ಬದುಕಲಿಲ್ಲ ಹೆಣ್ಣು ಒರಾಂಗೂಟಾನ್  “ಮಿನ್ನಿ”..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸತತ 8ನೇ ಬಾರಿಗೆ ದೇಶದ ‘ಸ್ವಚ್ಛ ನಗರಿ ಪಟ್ಟ ಅಲಂಕರಿಸಿದ ಇಂದೋರ್ : ಮೈಸೂರಿಗೆ ಎಷ್ಟನೇ ಸ್ಥಾನ?

ನವದೆಹಲಿ,ಜುಲೈ,17,2025 (www.justkannada.in): ಮಧ್ಯಪ್ರದೇಶದ ಇಂದೋರ್ ನಗರವು ಸತತ ಎಂಟನೇ ಬಾರಿಗೆ  ದೇಶದ...

ರಾಹುಲ್ ಗಾಂಧಿ ಯಾವ ನ್ಯಾಯ ಯೋಧ? ಸಿದ್ದು ಚಮಚಗಿರಿ ಮಾಡ್ತಿದ್ದಾರೆ- ಹೆಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು,ಜುಲೈ,17,2025 (www.justkannada.in): ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಅವರನ್ನ ನ್ಯಾಯಯೋಧ ಎಂದು...

ತಾಕತ್ ಇದ್ರೆ ಕಾರಜೋಳ ಅವರನ್ನೇ ಮುಂದಿನ ಸಿಎಂ ಅಭ್ಯರ್ಥಿ ಎಂದು ಘೋಷಿಸಿಬಿಡಿ-ಬಿವೈವಿಗೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,17,2025 (www.justkannada.in):  ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ...

ನಾಳೆ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು,ಜುಲೈ,17,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 18 (ನಾಳೆ)ರಂದು ಮೈಸೂರು...