ಬೆಂಗಳೂರು,ಫೆಬ್ರವರಿ,12,2025 (www.justkannada.in): 2024-25ನೇ ಸಾಲಿನ ರಾಜ್ಯಮಟ್ಟದ ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
ದಿನಾಂಕ 25-02-2025ರಿಂದ 04-03-2025ರವರೆಗೆ ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯಲಿದ್ದು ಸದರಿ ಪೂರ್ವ ಸಿದ್ಧತಾ ಪರೀಕ್ಷೆಯ ಕೆಲವು ವಿಷಯಗಳ ಸಮಯವನ್ನು ಮಾರ್ಪಾಡು ಮಾಡಿ, ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
ಎಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.karnataka.gov.in ಇಲ್ಲಿ ಪಡೆದುಕೊಂಡು, ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿದೆ.
ಫೆಬ್ರವರಿ 25 ರಂದು ಪ್ರಥಮ ಭಾಷೆ ಕನ್ನಡ, ಫೆ. 27 ರಂದು ಗಣಿತ, ಫೆಬ್ರವರಿ 28 ರಂದು ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ), ಮಾರ್ಚ್ 1 ರಂದು ಹಿಂದಿ ಅಥವಾ ತೃತೀಯ ಭಾಷೆ, ಮಾರ್ಚ್ 3ರಂದು ವಿಜ್ಞಾನ, ಮಾರ್ಚ್ 4 ರಂದು ಸಮಾಜ ವಿಜ್ಞಾನ ಪರೀಕ್ಷೆ ಇರಲಿದೆ.
ಮೊದಲ 3 ಪರೀಕ್ಷೆ ಬೆಳಗ್ಗೆ 10ರಿಂದ ಮಧ್ಯಾಹ್ನ 1.15ರ ವರೆಗೆ ನಡೆಯಲಿವೆ. ಅನಂತರದ 3 ಪರೀಕ್ಷೆಗಳು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಅಥವಾ 5.15ರ ವರೆಗೆ ನಡೆಯಲಿವೆ ಎಂದು ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.
Key words: Revised, schedule, SSLC Preparatory Exam, announced
The post SSLC ಪೂರ್ವ ಸಿದ್ಧತಾ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.