ಬೆಂಗಳೂರು,ಮೇ,2,2025 (www.justkannada.in): 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಶೇ.66.1ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಈ ಬಾರಿ 22 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಜಿಲ್ಲಾವಾರು ಫಲಿತಾಂಶ ಹೀಗಿದೆ
ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ(ಶೇ.91.12), ಉಡುಪಿ ಜಿಲ್ಲೆ 2ನೇ ಸ್ಥಾನ(ಶೇ.89.96), ಉತ್ತರ ಕನ್ನಡ ಜಿಲ್ಲೆಗೆ 3ನೇ ಸ್ಥಾನ(ಶೇ.83.19), ಶಿವಮೊಗ್ಗ ಜಿಲ್ಲೆಗೆ 4ನೇ ಸ್ಥಾನ(ಶೇ.82.29), ಕೊಡಗು ಜಿಲ್ಲೆಗೆ 5ನೇ ಸ್ಥಾನ(ಶೇ.82.21), ಹಾಸನ 6ನೇ ಸ್ಥಾನ ಶಿರಸಿ 7ನೇ ಸ್ಥಾನ, ಚಿಕ್ಕಮಗಳೂರು 8ನೇ ಸ್ಥಾನ, ಬೆಂಗಳೂರು ಗ್ರಾಮಾಂತರ 9ನೇ ಸ್ಥಾನ ಹಾವೇರಿ 13ನೇ ಸ್ಥಾನ ಮೈಸೂರು 15ನೇ ಸ್ಥಾನ ಪಡೆದಿದ್ದು ಕಲಬುರಗಿ ಕೊನೆಯ ಸ್ಥಾನ(ಶೇ42.43) ಪಡೆದಿದೆ.
2025 ಮಾರ್ಚ್ 21ರಿಂದ ಏಪ್ರಿಲ್ 4 ರವರೆಗೆ ರಾಜ್ಯದ 2,818 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗಿತ್ತು. 4,61563 ಹುಡುಗರು ಮತ್ತು 4,34,884 ಹುಡಗಿಯರು ಪರೀಕ್ಷೆ ಬರೆದಿದ್ದರು. ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಲಭ್ಯವಿದ್ದು, https://karresults.nic.in ಜಾಲತಾಣದಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.
Key words: SSLC Result, 625 Marks, 22 students, Dakshina Kannada district, first place
The post SSLC Result: 22 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.