11
November, 2025

A News 365Times Venture

11
Tuesday
November, 2025

A News 365Times Venture

SUMMER EFFECT : ನೀರು ಬಳಕೆಗೆ ನಿರ್ಬಂಧ ಹೇರಿದ BWSSB..!

Date:

ಬೆಂಗಳೂರು,ಫೆಬ್ರವರಿ,18,2025 (www.justkannada.in):  ಚಳಿಗಾಲ ಮುಗಿದು ಇನ್ನೇನು ಬೇಸಿಗೆ ಕಾಲ ಶುರುವಾಗಲಿದ್ದು  ಈ ಹಿನ್ನೆಲೆಯಲ್ಲಿ  ಕುಡಿಯುವ ನೀರನ್ನ ಅನಗತ್ಯವಾಗಿ ಪೋಲು ಮಾಡುವುದನ್ನ ತಡೆಗಟ್ಟಲು ಮುಂದಾಗಿರುವ ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿ ಇದೀಗ ನೀರು ಬಳಕೆಗೆ ಕೆಲ ನಿರ್ಬಂಧಗಳನ್ನ ವಿಧಿಸಿದೆ.

ಈ ಕುರಿತು ಆದೇಶ ಹೊರಡಿಸಿರುವ ಬಿಡಬ್ಲ್ಯೂ ಎಸ್ ಎಸ್ ಬಿ,   ಬೆಂಗಳೂರು ಮಹಾನಗರದಲ್ಲಿ ಖಾಯಂ ವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿ ಸುಮಾರು 1 ಕೋಟಿ 40 ಲಕ್ಷ ಜನಸಂಖ್ಯೆಯನ್ನು ಗುರುತಿಸಲಾಗಿದೆ. ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯವಾಗಿರುತ್ತದೆ. ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿದಿದ್ದು, ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟಲು ಅವಶ್ಯವೆಂದು ಮನಗಂಡು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ ಅಗತ್ಯಪಡಿಸಲಾಗಿದೆ.  ಈ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ   ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34 ರ ಅನುಸಾರ ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು, ವಾಹನಗಳ ಸ್ವಚ್ಚತೆಗೆ, ಕೈದೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ, ಸಿನಿಮಾ ಮಂದಿರ ಮತ್ತು ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ, ರಸ್ತೆ ನಿರ್ಮಾಣ ಮತ್ತು ಸ್ವಚ್ಚತೆಗೆ ಬಳಕೆ ಮಾಡದಂತೆ ನಿರ್ಬಂಧಿಸಲಾಗಿದೆ ಎಂದು ತಿಳಿಸಿದೆ.

ಹಾಗೆಯೇ ಈ ನಿಷೇಧ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ, ಉಲ್ಲಂಘನೆ ಮಾಡುವವರ ವಿರುದ್ದ ಜಲಮಂಡಳಿಯ ಕಾಯ್ದೆ 1964 ರ ಕಲಂ 109 ರಂತೆ ರೂ. 5000/- ಗಳ ದಂಡ ವಿಧಿಸಲಾಗುವುದು. ಈ ಉಲ್ಲಂಘನೆಯು ಮರುಕಳಿಸಿದಲ್ಲಿ ದಂಡ ಮೊತ್ತ ರೂ.5000/- ಜೊತೆಗೆ ಹೆಚ್ಚುವರಿಯಾಗಿ ರೂ.500/-ಪ್ರತಿದಿನದಂತೆ ದಂಡ ಹಾಕಲಾಗುವುದು.

ಸಾರ್ವಜನಿಕರು ಮೇಲ್ಕಂಡ ನಿಷೇಧಗಳನ್ನು ಯಾರಾದರು ಉಲ್ಲಂಘನೆ ಮಾಡುವದು ಕಂಡುಬಂದಲ್ಲಿ ಕೂಡಲೇ ಮಂಡಳಿಯ ಕಾಲ್ ಸೆಂಟರ್ ಸಂಖ್ಯೆ : 1916 ಗೆ ತಿಳಿಸಬಹುದಾಗಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

Key words: BWSSB, imposes, restrictions , water consumption

The post SUMMER EFFECT : ನೀರು ಬಳಕೆಗೆ ನಿರ್ಬಂಧ ಹೇರಿದ BWSSB..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...