25
August, 2026

A News 365Times Venture

25
Tuesday
August, 2026

A News 365Times Venture

UNIVERSITY OF MYSORE: “ಸಿ.ಡಿ.ಸಿ” ನಿರ್ದೇಶಕರಾಗಿ ಪ್ರೊ.ಮಂಟೇಲಿಂಗು ನೇಮಕ

Date:

ಮೈಸೂರು, ಫೆ.೧೩,೨೦೨೫: ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ರಾಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಮಂಟೆಲಿಂಗು ಅವರನ್ನು ನೇಮಕ ಮಾಡಲಾಗಿದೆ.

ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರ ಹುದ್ದೆ ನೇಮಕಕ್ಕೆ ಸಂಬಂಧಿಸಿದಂತೆ ಸಂದರ್ಶನ ನಡೆದು ಅನೇಕರು ಪೈಪೋಟಿಯಲ್ಲಿದ್ದರು.  ಅಂತಿಮವಾಗಿ ಇದೀಗ ಪ್ರೊ.ಮಂಟೆಲಿಂಗು ಅವರನ್ನು ನೇಮಕ ಮಾಡಲಾಗಿದೆ.

ಕಾವೇರಿದ ಚರ್ಚೆ:

ಯುಜಿಸಿ ನಿಯಮಾವಳಿ ಉಲ್ಲಂಘಿಸಿ ಬೋದಕ ಹುದ್ದೆಗಳಿಗೆ ಬಡ್ತಿ ನೀಡಿರುವ ಕುರಿತು ಗುರುವಾರ ನಡೆದ ಸಿಂಡಿಕೇಟ್ ಸಭೆಯಲ್ಲಿ ಕಾವೇರಿದ ಚರ್ಚೆ ನಡೆಯಿತು. ಜತೆಗೆ ಬಡ್ತಿಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಲಾಯಿತು.

ವಿವಿಯ ಸಹಾಯಕ ಪ್ರಾಧ್ಯಾಪಕರು, ಅಸೋಸಿಯೇಟ್ ಪ್ರಾಧ್ಯಾಪಕರು,ಸೀನಿಯರ್ ಪ್ರಾಧ್ಯಾಪಕರಿಗೆ ಬಡ್ತಿ ನೀಡುವ ಕುರಿತಂತೆ ಯುಜಿಸಿ ನಿಯಮಾವಳಿ ಉಲ್ಲಂಘಿಸಲಾಗಿದೆ. ಸರ್ಕಾರದ ನಿರ್ದೇಶನವಿದ್ದರೂ ಹಿಂದಿನ ಕುಲಪತಿಗಳ ಅವಧಿಯಲ್ಲಿ ಬಡ್ತಿ ನೀಡಲಾಗಿದೆ ಎಂದು ಸದಸ್ಯರೊಬ್ಬರು ಸಭೆಯ ಗಮನಕ್ಕೆ ತಂದರು.  ಯುಜಿಸಿ ನಿಯಮಾವಳಿ ಉಲ್ಲಂಘಿಸಿದ್ದರಿಂದ ಅಂತಹವರನ್ನು  ಹುದ್ದೆಯಿಂದ ವಾಪಸ್ ಪಡೆಯಬೇಕು. ಈ ಬಗ್ಗೆ ಕಾನೂನು ಕ್ರಮಜರುಗಿಸಬೇಕು ಎಂದು ಒತ್ತಾಯಿಸಲಾಗಿದೆ.

ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಸೇರಿದಂತೆ ೮೦ಕ್ಕೂ ಹೆಚ್ಚು ಜನರು ಎಚ್‌ಆರ್‌ಎ ಪಡೆಯುತ್ತಿದ್ದರೂ ವಸತಿಗೃಹಗಳನ್ನು ಪಡೆದುಕೊಂಡಿದ್ದಾರೆ.  ನಿಯಮಾನುಸಾರ ವಸತಿಗೃಹ ಪಡೆಯಬೇಕಾದರೆ ಎಚ್‌ಆರ್ ಪಡೆಯುವಂತಿಲ್ಲ. ಇಲ್ಲಿ ತಪ್ಪು ಮಾಹಿತಿ ಕೊಡಲಾಗಿದೆ. ಹಾಗಾಗಿ,ಈ ಬಗ್ಗೆ ಅಗತ್ಯ ಪರಿಶೀಲಿಸಿ ಕ್ರಮಕೈಗೊಳ್ಳಬೇಕು. ದಂಡ ವಿಧಿಸುವ ಜತೆಗೆ ಕಾನೂನು ಕ್ರಮಜರುಗಿಸಬೇಕು ಎಂದು ಸದಸ್ಯರು ಕುಲಪತಿಗಳನ್ನು ಒತ್ತಾಯಿಸಿದರು.

KEY WORDS: UNIVERSITY OF MYSORE, PROF. MANTELINGU, DIRECTOR OF CDC

SUMMARY:

UNIVERSITY OF MYSORE: PROF. MANTELINGU APPOINTED DIRECTOR OF CDC

The post UNIVERSITY OF MYSORE: “ಸಿ.ಡಿ.ಸಿ” ನಿರ್ದೇಶಕರಾಗಿ ಪ್ರೊ.ಮಂಟೇಲಿಂಗು ನೇಮಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...