4
March, 2026

A News 365Times Venture

4
Wednesday
March, 2026

A News 365Times Venture

ಅತಿಥಿ ಶಿಕ್ಷಕ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Date:

ಬೆಂಗಳೂರು ಗ್ರಾಮಾಂತರ, ಮೇ,9,2025 (www.justkannada.in): 2025-26ನೇ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು 36 ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ಹುದ್ದೆಗಳಿಗೆ ಗೌರವಧನ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ಅತಿಥಿ ಶಿಕ್ಷಕ ಹಾಗೂ ಅತಿಥಿ ಉಪನ್ಯಾಸಕರ ಹುದ್ದೆಗೆ ಬಿಎ, ಬಿಎಸ್ಸಿ, ಬಿ.ಎಸ್.ಸಿ, ಬಿ.ಸಿ.ಎ ಮತ್ತು ಎಂ.ಎ, ಎಂ.ಎಸ್.ಸಿ ಹಾಗೂ ಬಿ.ಎಡ್ ಸೇರಿ ಸಂಬಂಧಪಟ್ಟ ವಿಷಯವಾರು ವಿದ್ಯಾರ್ಹತೆ ಹೊಂದಿರಬೇಕು.

ಹುದ್ದೆಗಳು ಖಾಲಿಯಿರುವ ಶಾಲೆಗಳ ಪಟ್ಟಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ,(1 ರಿಂದ 10ನೇ ತರಗತಿ ಸಿ.ಬಿ.ಎಸ್.ಇ) ಹಾಗೂ (ಪದವಿ ಪೂರ್ವ ರಾಜ್ಯ ಪಠ್ಯಕ್ರಮ ಪಿ.ಸಿ.ಎಂ.ಬಿ)  ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು. ಮೊರಾರ್ಜಿ ದೇಸಾಯಿ ವಸತಿ ಶಾಲೆ, (1 ರಿಂದ 10ನೇ ತರಗತಿ ಸಿ.ಬಿ.ಎಸ್.ಇ) ಹಾಗೂ (ಪದವಿ ಪೂರ್ವ ರಾಜ್ಯ ಪಠ್ಯಕ್ರಮ ಪಿ.ಸಿ.ಎಂ.ಬಿ) ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ವಿಜಯಪುರ, ದೇವನಹಳ್ಳಿ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ, ನೆಲಮಂಗಲ ತಾಲ್ಲೂಕು.

ಮೇಲ್ಕಂಡ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣವಾದ https://dom.karnataka.gov.in ಅಥವಾ ನೇರವಾಗಿ ಸಂಬಂಧಪಟ್ಟ ಜಿಲ್ಲಾ ಕಛೇರಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ:216, 2ನೇ ಮಹಡಿ ಜಿಲ್ಲಾಡಳಿತ ಭವನದಲ್ಲಿ ತಮ್ಮ ದಾಖಲೆಗಳೊಂದಿಗೆ ಕೊನೆಯ ದಿನಾಂಕ ಮೇ 19 ರ ಒಳಗಾಗಿ ಕಛೇರಿ ಸಮಯದಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ,ದೂರವಾಣಿ ಸಂಖ್ಯೆ:080-29787455 ಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Application, guest, teacher, lecturer, post

The post ಅತಿಥಿ ಶಿಕ್ಷಕ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು: ಕುದುರೆಗೆ ಕೃತಕ ಕಾಲು ಜೋಡಣೆ ಯಶಸ್ವಿ

ಮೈಸೂರು,ಮಾರ್ಚ್,4,2026 (www.justkannada.in): ಮೈಸೂರು ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಗಂಭೀರವಾಗಿ ಗಾಯಗೊಂಡಿದ್ದ...

ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ

ಬೆಂಗಳೂರು, ಮಾರ್ಚ್​,4,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ...

KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ...

ಭೀಕರ ಅಪಘಾತದಲ್ಲಿ ಐವರು ದುರ್ಮರಣ

ಚಿತ್ತೂರು,ಮಾರ್ಚ್,4,2026 (www.justkannada.in): ಹಿಂಬದಿಯಿಂದ ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು...