ತುಮಕೂರು,ಏಪ್ರಿಲ್,1,2026 (www.justkannada.in): ಸೇತುವೆ ತಡೆಗೋಡೆಗೆ ಕಾರು ಡಿಕ್ಕಿಯಾಗಿ ಬಳಿಕ ಹೊತ್ತಿ ಉರಿದು ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಚಿಕ್ಕನಾಯಕನಗಹಳ್ಳಿ ತಾಲ್ಲೂಕು ಹುಳಿಯಾರು ಬಳಿ ಕೋರಗೆರೆ ಸೇತುವೆ ಬಳಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮೂವರು ಮೃತಪಟ್ಟು ಓರ್ವನ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾರು ವೇಗವಾಗಿ ಬಂದು ಸೇತುವೆ ತಡೆಗೋಡೆಗೆ ಡಿಕ್ಕಿಹೊಡೆದಿದ್ದು ಡಿಕ್ಕಿ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ.
Key words: Three people, burnt alive, car accident
The post ಅಪಘಾತದಲ್ಲಿ ಕಾರು ಹೊತ್ತಿ ಉರಿದು ಮೂವರು ಸಜೀವ ದಹನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




