ಮಂಡ್ಯ,ಆಗಸ್ಟ್,20,2026 (www.justkannada.in): ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಆಗಸ್ಟ್ 26 ರಂದು ಕೆಆರ್ ಎಸ್ ಮುತ್ತಿಗೆ ಹಾಕುತ್ತೇವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದರು.
ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನ ಖಂಡಿಸಿ ಇಂದು ಮಂಡ್ಯದ ಸಂಜಯ್ ವೃತ್ತದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಕೆಆರ್ ಎಸ ನಿಂದ ತಮಿಳುನಾಡಿಗೆ ನಿತ್ಯ ನೀರು ಹರಿಸುತ್ತಿದ್ದೀರಿ. ನೀರು ಹರಿಸಲ್ಲವೆಂದಿ ಹೇಳುತ್ತಿದ್ದೀರಿ. ಆದರೆ 15 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಆಗಸ್ಟ್ 26ರಂದು ಕೆಆರ್ ಎಸ್ ಗೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದರು.
ರಸ್ತೆ ತಡೆದು ಪ್ರತಿಭಟನೆ ನಡೆಸಿದ ಹಿನ್ನೆಲೆ ಮಂಡ್ಯ ಪೊಲೀಸರು ವಾಟಾಳ್ ನಾಗರಾಜ್ ಅವರನ್ನ ವಶಕ್ಕೆ ಪಡೆದರು.
Key words: Cauvery water, Tamilnadu, KRS , protest, August 26, Vatal Nagaraj
The post ಆ.26 ರಂದು ಕೆಆರ್ ಎಸ್ ಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




