ಬೆಂಗಳೂರು,ಏಪ್ರಿಲ್,6,2026 (www.justkannada.in) : ಎಲ್ ಪಿಜಿ ಗ್ಯಾಸ್ ಅಭಾವದಿಂದ ಮತ್ತು ಖಾಸಗಿ ಗ್ಯಾಸ್ ಸ್ಟೇಷನ್ ನವರು ಗ್ಯಾಸ್ ಬೆಲೆ ಏರಿಕೆ ಮಾಡಿರುವುದರಿಂದ ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿ ಸಮಸ್ಯೆ ಬಗೆ ಹರಿಸುವುದಾಗಿ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಭರವಸೆ ನೀಡಿದ್ದಾರೆ.
ಇಂದು ಆಟೋ ಚಾಲಕರ ಜೊತೆ ಚರ್ಚೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ಖಾಸಗಿ ಸ್ಟೇಷನ್ ನವರು ಆಟೋಚಾಲಕರ ಗ್ಯಾಸ್ ಬೆಲೆ ಏರಿಕೆ ಮಾಡಿದ್ದಾರೆ. ಏಪ್ರಿಲ್ 10 ರಂದು ಅಧಿಕಾರಿಗಳು ಗ್ಯಾಸ್ ಸ್ಟೇಷನ್ ಮಾಲೀಕರ ಜೊತೆ ಸಭೆ ಮಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದರು.
ಕೇಂದ್ರ ಸರ್ಕಾರ ಈಗ ರಷ್ಯಾದಿಂದ ತೈಲ ಅಮದು ಮಾಡಿಕೊಳ್ಳಲು ಮುಂದಾಗಿದೆ. ಮುಂಚೆಯೇ ಈ ರೀತಿ ಮಾಡಿದ್ದರೇ ಈ ಸಮಸ್ಯೆ ಆಗುತ್ತಿರಲಿಲ್ಲ ಎಂದು ಸಚಿವ ಕೆ.ಎಚ್ ಮುನಿಯಪ್ಪ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದರು.
Key words: Gas shortage, autos, Minister, K.H. Muniyappa
The post ಆಟೋಗಳಿಗೆ ಗ್ಯಾಸ್ ಅಭಾವ: ಸಭೆ ನಡೆಸಿ ಸಮಸ್ಯೆ ಬಗೆಹರಿಸುವೆ- ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




