ಬೆಂಗಳೂರು,ಮೇ,25,2026 (www.justkannada.in): ದೆಹಲಿಗೆ ಬರುವಂತೆ ಹೈಕಮಾಂಡ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದೇ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದಾರೆ.
ಇಂದು ಸಂಜೆ 7 ಗಂಟೆಗೆ ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದು ಇಂದು ರಾತ್ರಿ ದೆಹಲಿಯ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಬಳಿಕ ನಾಳೆ ಬೆಳಿಗ್ಗೆ 11 ಗಂಟೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆಯುವ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ , ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ ಎನ್ನಲಾಗಿದೆ.
ನಾಳಿನ ಸಭೆಯಲ್ಲಿ ಸಚಿವ ಸಂಪುಟ ಪುನಾರಚನೆ ರಾಜ್ಯಸಭಾ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ. ಅಧಿಕಾರ ಹಂಚಿಕೆಯ ವಿಚಾರದ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
Key words: CM Siddaramaiah, Delhi, today, Meeting
The post ಇಂದೇ ದೆಹಲಿಗೆ ಸಿಎಂ ಸಿದ್ದರಾಮಯ್ಯ: ನಾಳೆ ವರಿಷ್ಠರ ಜೊತೆ ಸಭೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




