30
September, 2026

A News 365Times Venture

30
Wednesday
September, 2026

A News 365Times Venture

ಎಸ್‌ ಐಆರ್‌ ಪೂರ್ಣಗೊಂಡ ರಾಜ್ಯಗಳಲ್ಲಿ ಫಾರ್ಮ್-6 ಘೋಷಣೆ ಹಿಂಪಡೆದ  ಚುನಾವಣಾ ಆಯೋಗ

Date:

ನವದೆಹಲಿ,ಸೆಪ್ಟಂಬರ್‌,30,2026 (www.justkannada.in) ECINET ಆಯಪ್, ಪೋರ್ಟಲ್ ಹಾಗೂ ಸಂಬಂಧಪಟ್ಟ ಮುಖ್ಯ ಚುನಾವಣಾಧಿಕಾರಿಗಳ (CEO) ಪೋರ್ಟಲ್ ‌ಗಳಿಂದ ಹೆಚ್ಚುವರಿಯಾಗಿ ಸೇರಿಸಲಾಗಿದ್ದ  ಎಸ್‌ ಐಆರ್‌  ಸಂಬಂಧಿತ ಫಾರ್ಮ್-6 ಅನ್ನು ಕೇಂದ್ರ ಚುನಾವಣಾ ಆಯೋಗ ಹಿಂಪಡೆದಿದೆ.

ಎಸ್‌ ಐಆರ್‌ ಪ್ರಕ್ರಿಯೆ ಪೂರ್ಣಗೊಂಡಿರುವ ರಾಜ್ಯಗಳಲ್ಲಿ ಆನ್‌ ಲೈನ್ ಮತದಾರರ ನೋಂದಣಿ ಅರ್ಜಿ ಫಾರ್ಮ್-6 ನಲ್ಲಿ ಹೆಚ್ಚುವರಿಯಾಗಿ ಸೇರಿಸಲಾಗಿದ್ದ  ಎಸ್‌ ಐಆರ್‌  ಸಂಬಂಧಿತ ಘೋಷಣೆಯನ್ನು ಚುನಾವಣಾ ಆಯೋಗ ಹಿಂಪಡೆದಿದೆ.

SIR ಪ್ರಕ್ರಿಯೆ ನಡೆಯುತ್ತಿರುವ ಅವಧಿಯಲ್ಲಿ ಮಾತ್ರ ಈ ಹೆಚ್ಚುವರಿ ಘೋಷಣೆ ಅನ್ವಯವಾಗಲಿದೆ ಎಂದು ಚುನಾವಣಾ ಆಯೋಗ ನಿರ್ಧರಿಸಿದ ಕೆಲ ದಿನಗಳ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

ಹೆಚ್ಚುವರಿ ಘೋಷಣೆಯಲ್ಲಿ ಹೊಸದಾಗಿ ಮತದಾರರಾಗಿ ನೋಂದಣಿಗೆ ಅರ್ಜಿ ಸಲ್ಲಿಸುವವರು, ತಾವು ಅಥವಾ ತಮ್ಮ ತಂದೆ-ತಾಯಿ ಅಥವಾ ಅಜ್ಜ-ಅಜ್ಜಿ ಹಿಂದಿನ ವಿಶೇಷ ತೀವ್ರ ಪರಿಷ್ಕರಣೆ ಸಂದರ್ಭದಲ್ಲಿ ಸಿದ್ಧಪಡಿಸಲಾದ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದ ಬಗ್ಗೆ ವಿವರಗಳನ್ನು ನೀಡಬೇಕಾಗಿತ್ತು.

SIR ಪ್ರಕ್ರಿಯೆ ಇನ್ನೂ ನಡೆಯುತ್ತಿರುವ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಘೋಷಣೆ ECINET ಪೋರ್ಟಲ್‌ ನಲ್ಲಿ ಮುಂದುವರಿಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ: ಭದ್ರತೆ ಮತ್ತಷ್ಟು ಬಿಗಿ; 6 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆಗೆ ಸಿದ್ಧತೆ

ಮೈಸೂರು,ಸೆಪ್ಟಂಬರ್‌,30,2026 () ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್...

ಬರ ಪರಿಹಾರ ನೀಡಿಲ್ಲ, ಸರ್ವಪಕ್ಷ ನಿಯೋಗ ಬದಲು ಜನತಾ ನ್ಯಾಯಾಲಯಕ್ಕೆ ಹೋಗುತ್ತೇವೆ: ಆರ್‌.ಅಶೋಕ್

ಬೆಂಗಳೂರು, ಸೆಪ್ಟೆಂಬರ್‌ 30,2026(www.justkannada.in): ಬರಗಾಲಕ್ಕೆ ಸಂಬಂಧಿಸಿದಂತೆ ರೈತರಿಗಾಗಿ ನಾವು ಇಟ್ಟ ಬೇಡಿಕೆಗಳನ್ನು...

ಶಿಕಾರಿಪುರದಿಂದಲೇ ರಾಜಕೀಯ ‘ಶಿಕಾರಿ’ ಆರಂಭ- ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ  ಸೆಪ್ಟೆಂಬರ್, 30,2026 (www.justkannada.in): ಶಿಕಾರಿಪುರದಿಂದ ರಾಜಕೀಯ ‘ಶಿಕಾರಿ’ ಇಂದಿನಿಂದಲೇ ಆರಂಭವಾಗಿದೆ....

ಬಿಜೆಪಿ ಸರ್ಕಾರಗಳ ಅನಾಹುತಗಳಿಂದಾಗಿಯೇ ಆರ್ಥಿಕ ಇಲಾಖೆ  ನಮಗೆ ಪತ್ರ ಬರೆದಿದ್ದಾರೆ: ಸಿಎಂ ಡಿ. ಕೆ ಶಿವಕುಮಾರ್

ಚಾಮರಾಜನಗರ, ಸೆಪ್ಟಂಬರ್‌,30,2026 (www.justkannada.in) ಯಡಿಯೂರಪ್ಪನವರು ಬಜೆಟ್ ಮೀರಿ ಯೋಜನೆಗಳ ಕಾಮಗಾರಿ ಪ್ರಾರಂಭಿಸಿದ್ದರು....