19
April, 2026

A News 365Times Venture

19
Sunday
April, 2026

A News 365Times Venture

ಏ.20 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

Date:

ಮೈಸೂರು,ಏಪ್ರಿಲ್,18,2026 (www.justkannada.in):  ಸಿಎಂ ಸಿದ್ದರಾಮಯ್ಯ ಏಪ್ರಿಲ್ 20 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು  ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಅಂದು ಬೆಳಿಗ್ಗೆ ಬೆಂಗಳೂರನಿಂದ ಹೊರಟು 11.25ಕ್ಕೆ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಕಲಾಮಂದಿರದಲ್ಲಿ ಆಯೋಜಿಸಿರುವ  ಬಸವ ಜಯಂತಿ-2026 ಕಾರ್ಯಕ್ರಮವನ್ನ ಉದ್ಘಾಟಿಸಿ 2026ರ ಬಸವಶ್ರೀ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ನಂತರ ಮಧ್ಯಾಹ್ನ 2 ಗಂಟೆಗೆ ಹುಣಸೂರಿಗೆ ತೆರಳಿ ಮಾದಳ್ಳಿಯ ಉಕ್ಕಿನಕಂತೆ ಮಠದಲ್ಲಿ ನಡೆಯುವ ಬಸವ ಜಯಂತಿ ಕಾರ್ಯಕ್ರಮ ಮತ್ತು ಬಸವ ಮಹಾದ್ವಾರ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 3.15ಕ್ಕೆ ತಾಲ್ಲೂಕು ಕುರುಬರ ಅಭಿವೃದ್ದಿ ಸಮಿತಿ ವತಿಯಿಂದ ಆಯೋಜಿಸಿರುವ ಶ್ರೀ ಗಣಪತಿ ದೇವಸ್ಥಾನ ಉದ್ಗಾಟನೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ.

ಸಂಜೆ 4.30ಕ್ಕೆ  ಹುಣಸೂರಿನಲ್ಲಿ ಗ್ರಾಮದೇವತೆ  ಮುತ್ತುಮಾರಮ್ಮ ದೇವಸ್ಥಾನದ 23ನೇ ವರ್ಷದ ವಾರ್ಷಿಕೋತ್ಸವ ಹಾಗೂ ಬೆಳ್ಳಿರಥ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4 ಗಂಟೆಗೆ ಮೈಸೂರಿಗೆ ವಾಪಸ್ ಆಗಿ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

Key words: CM Siddaramaiah, visit ,Mysore district, April 20

The post ಏ.20 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೃತಕ ಬುದ್ದಿಮತ್ತೆಗಾಗಿ ನಿಯಂತ್ರಕ ಚೌಕಟ್ಟು ರೂಪಿಸುವಲ್ಲಿ ನ್ಯಾಯಾಂಗ ನಿರ್ಣಾಯಕ ಪಾತ್ರ ವಹಿಸುತ್ತದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,18,2026 (www.justkannada.in): ಭಾರತದಲ್ಲಿ ಕೃತಕ ಬುದ್ಧಿಮತ್ತೆಗಾಗಿ ನಿಯಂತ್ರಕ ಚೌಕಟ್ಟನ್ನು ರೂಪಿಸುವಲ್ಲಿ ನ್ಯಾಯಾಂಗವು...

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ ,18,2026 (www.justkannada.in): ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು  ...

ನೂತನ ಜನಗಣತಿಯ ಆಧಾರದಲ್ಲಿ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಎಂ‌ಎಲ್‌ ಸಿ ಕೆ.ಶಿವಕುಮಾರ್

ಮೈಸೂರು,ಏಪ್ರಿಲ್, 18,2026 (www.justkannada.in): ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಹಾಗೂ...

ಮಹಿಳಾ ಮೀಸಲಾತಿ ಮಸೂದೆ ಸೋಲು: ಪ್ರಜಾಪ್ರಭುತ್ವ, ವಿಪಕ್ಷಗಳ ಏಕತೆಯ ಗೆಲುವು- ಪ್ರಿಯಾಂಕ ಗಾಂಧಿ

ನವದೆಹಲಿ, ಏಪ್ರಿಲ್,18,2026 (www.justkannada.in): ಮಹಿಳಾ ಮೀಸಲಾತಿ ಮಸೂದೆ ಸೋತಿರುವುದು ಸಂವಿಧಾನ, ಪ್ರಜಾಪ್ರಭುತ್ವ...