ಬೆಂಗಳೂರು,ಏಪ್ರಿಲ್,24,2026 (www.justkannada.in): ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಲ್ಲಿ ಉಂಟಾಗಿದ್ದ ಗೊಂದಲವನ್ನು ನಿವಾರಿಸುವಲ್ಲಿ ರಾಜ್ಯ ಸರ್ಕಾರ ಸಫಲವಾಗಿದ್ದು ಇದೀಗ ಒಳಮೀಸಲಾತಿ ಹಂಚಿಕೆ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ.
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕಗ್ಗಂಟಿಗೆ ಅಂತ್ಯ ಹಾಡಲಾಗಿದೆ. ದಲಿತ ಎಡಗೈ ಸಮುದಾಯಕ್ಕೆ ಶೇ 5.25ರಷ್ಟು ದಲಿತ ಬಲಗೈ ಸಮುದಾಯಕ್ಕೆ ಶೇ 5.25 ರಷ್ಟು ಇತರರಿಗೆ ಶೇ 4.5 ರಷ್ಟು ಮೀಸಲಾತಿ ಹಂಚಿಕೆ ಮಾಡುವ ಮೂಲಕ ನಿರ್ಣಯ ಕೈಗೊಳ್ಳಲಾಗಿದೆ.
ಇದೀಗ ಒಳಮೀಸಲಾತಿ ಕಗ್ಗಂಟು ಬಗೆಹರಿದಿದ್ದು ಇನ್ನಾದರೂ ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ನೇಮಕಾತಿಗಳು ಪ್ರಾರಂಭವಾಗುತ್ತದೆಯೋ ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡುತ್ತದೆಯೋ ಕಾದು ನೋಡಬೇಕಿದೆ.
Key words: internal reservation, Important decision, cabinet meeting
The post ಒಳಮೀಸಲಾತಿ ಕಗ್ಗಂಟು ಅಂತ್ಯ: ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




