ನವದೆಹಲಿ, ಮಾರ್ಚ್, 2,2026 (www.justkannada.in): ಇರಾನ್-ಇಸ್ರೇಲ್ ಯುದ್ಧ ಹಿನ್ನೆಲೆಯಲ್ಲಿ ಅಲ್ಲಿ ಸಂಕಷ್ಟದಲ್ಲಿ ಸಿಲುಕಿದ ಕನ್ನಡಿಗರು ಸೇರಿ ಎಲ್ಲರನ್ನೂಸುರಕ್ಷಿತವಾಗಿ ಕರೆ ತರುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸನ್ನದ್ಧವಾಗಿದ್ದು, ಅಲ್ಲಿನ ರಾಯಭಾರಿ ಕಚೇರಿ ಉನ್ನತ ಅಧಿಕಾರಿಗಳ ಜತೆ ಮಾತುಕತೆ ನಡೆಸಿದೆ. ಎಲ್ಲಾ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಕನ್ನಡಿಗರು ಮಾತ್ರವಲ್ಲ ಭಾರತೀಯರನ್ನೆಲ್ಲ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಸರ್ವ ಸನ್ನದ್ಧವಾಗಿದೆ. ಈಗಾಗಲೇ ರಾಯಭಾರಿ ಅಧಿಕಾರಿಗಳ ಜತೆ ಮಾತುಕತೆ ನಡೆಸಲಾಗಿದೆ. ಯಾರೊಬ್ಬರೂ ಆತಂಕ ಪಡಬೇಕಿಲ್ಲ ಎಂದರು.
ಜಗತ್ತಿನ ಎಲ್ಲೇ ಆಗಲಿ ಕನ್ನಡಿಗರು ಸೇರಿದಂತೆ ಭಾರತೀಯರು ಸಂಕಷ್ಟಕ್ಕೆ ಸಿಲುಕಿದಾಗ ಕೇಂದ್ರ ಸರ್ಕಾರ ಸುರಕ್ಷಿತವಾಗಿ ಕರೆ ತಂದಿದೆ. ಹಿಂದೆ ಉಕ್ರೇನ್ ಅಲ್ಲಿ ಸಿಲುಕಿದ್ದವರನ್ನು ಮರಳಿ ಕರೆ ತಂದಿದ್ದೇವೆ. ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಗೆ ಕೇಂದ್ರ ಸರ್ಕಾರ ಪ್ರಥಮ ಆದ್ಯತೆ ನೀಡುತ್ತದೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.
Key words: Iran, Israel, conflict, Kannadigas, safely, Pralhad Joshi
The post ಕನ್ನಡಿಗರಷ್ಟೇ ಅಲ್ಲ ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ- ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




