12
March, 2026

A News 365Times Venture

12
Thursday
March, 2026

A News 365Times Venture

ಕಾಂಗ್ರೆಸ್, ಭಾರತದ ರಾಜಕೀಯ ಪಕ್ಷವೋ? ಅಥವಾ ಶತ್ರು ದೇಶದ ವಕ್ತಾರಿಕೆ ಮಾಡುತ್ತಿರುವ ಪಕ್ಷವೋ? ಕೇಂದ್ರ ಸಚಿವ ಹೆಚ್.ಡಿಕೆ ಕಿಡಿ

Date:

ಬೆಂಗಳೂರು,ಮೇ,17,2025 (www.justkannada.in): ಭಾರತ –ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್.ಡಿಕೆ,  ಪಹಲ್ಗಾಮ್’ನಲ್ಲಿ ಭಾರತೀಯ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕ ದಾಳಿ ಮತ್ತು ಉಗ್ರರಿಗೆ ಪಾಕಿಸ್ತಾನದ ಚಿತಾವಣಿಯಷ್ಟೇ ಅಲ್ಲದೇ ತನ್ನ ತನು-ಮನ-ಧನ ಅರ್ಪಣೆ ಮಾಡುತ್ತಿರುವುದನ್ನು ಖಂಡಿಸುವ ಬದಲಿಗೆ  ಕಾಂಗ್ರೆಸ್ ಪಕ್ಷವು ಸೇನಾಪಡೆಗಳನ್ನು, ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರನ್ನೂ ನಿಂದಿಸುತ್ತಿರುವುದು ನಾಚಿಕೆಗೇಡು ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್, ಭಾರತದ ರಾಜಕೀಯ ಪಕ್ಷವೋ? ಅಥವಾ ಶತ್ರು ದೇಶದ ವಕ್ತಾರಿಕೆ ಮಾಡುತ್ತಿರುವ ಪಕ್ಷವೋ? ಅದರ ತನ್ನ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? ಎಂಬುದನ್ನು ಅದುವೇ ಸ್ಪಷ್ಟಪಡಿಸಬೇಕು ಎಂದು ಹೆಚ್.ಡಿಕೆ ವಾಗ್ದಾಳಿ ನಡೆಸಿದ್ದಾರೆ.

ಪಾಕಿಸ್ತಾನ ಸೃಷ್ಟಿಯಾಗಿದ್ದು ಹೇಗೆ? ಅದರಲ್ಲಿ ಕಾಂಗ್ರೆಸ್ ಪಾತ್ರವೇನು? ಎಂಬ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ. ಆದರೆ, ದೇಶ ವಿಭಜನೆಯಾಗಿ ಏಳೂವರೆ ದಶಕ ಮೀರಿದರೂ ಆ ಪಕ್ಷ ಇನ್ನೂ ಪಾಕಿಸ್ತಾನ್ ಮನಃಸ್ಥಿತಿಯಲ್ಲೇ ಇದೆ! ಅಸ್ತಿತ್ವ ಭಾರತದಲ್ಲಿ, ಅದರ ಹೃದಯ ಮಾತ್ರ ಪಾಕಿಸ್ತಾನದಲ್ಲಿ!! ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ!!

ಅಪರೇಷನ್ ಸಿಂಧೂರ ಬಗ್ಗೆ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕುರಿತು ಕಿಡಿಕಾರಿದ ಹೆಚ್.ಡಿಕೆ,  ಕೋಲಾರದ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಪಕ್ಷದ ಅಂತರಾತ್ಮದ ದನಿ. ಆಚಾರವಿಲ್ಲದ ನಾಲಿಗೆ.. ಆಪರೇಷನ್ ಸಿಂದೂರ್ ಬೂಟಾಟಿಕೆಯಂತೆ! ಇಡೀ ರಾಷ್ಟ್ರದ ಹೆಮ್ಮೆಯಾಗಿರುವ ಈ ಯಶಸ್ವಿ ಕಾರ್ಯಾಚರಣೆ ವಿರಾಟ್ ಸ್ವರೂಪವನ್ನು ಖುದ್ದು ನೋಡಬೇಕೆ ಮಂಜುನಾಥ್..? ಹಾಗಿದ್ದರೆ ಬನ್ನಿ, ನಿಮ್ಮನ್ನು ಪಾಕಿಸ್ತಾನಕ್ಕೆ ಕಳಿಸಿ ಕೊಡುತ್ತೇವೆ. ಭಾರತೀಯ ಸೇನೆಯ ಪರಾಕ್ರಮವನ್ನು ಖುದ್ದು ನೋಡಿಕೊಂಡು ಬರುವಿರಂತೆ. ಹೋಗುವಿರಾ ಪಾಕಿಸ್ತಾನಕ್ಕೆ..? ಎಂದು ಸವಾಲು ಹಾಕಿದ್ದಾರೆ.

ಆಯೋಗಕ್ಕೆ ನಕಲಿ ಜಾತಿ ಪ್ರಮಾಣ ಪತ್ರ ಕೊಟ್ಟು ಜನತೆಗೆ ಟೋಪಿ ಹಾಕಿ ಚುನಾವಣೆ ಗೆದ್ದಿದ್ದ ಈ ಕಿಡಿಗೇಡಿ ಕಾಂಗ್ರೆಸ್ ಶಾಸಕ, ತನ್ನೊಳಗಿದ್ದ ವಿಷವನ್ನೇ ಕಕ್ಕಿಕೊಂಡಿದ್ದಾರೆ. ಅಂಥ ವಿಷಕಾರಿ DNA ಉಳ್ಳ ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರಪ್ರೇಮವಿರಲು ಸಾಧ್ಯವೇ..? ಆಪರೇಷನ್ ಸಿಂದೂರ್ ನಂತರ ಸೀನಿಯರ್ ಖರ್ಗೆ, ಜ್ಯೂನಿಯರ್ ಖರ್ಗೆ, ರಾಹುಲ್ ಗಾಂಧಿ ಸೇರಿ ಕರ್ನಾಟಕದ ಸೋ ಕಾಲ್ಡ್ ಕಾಂಗ್ರೆಸ್ ನಾಯಕರ ಆಣಿಮುತ್ತುಗಳನ್ನು ಗಮನಿಸಿದರೆ ಅವರ ಪ್ರೇಮ ಯಾವ ರಾಷ್ಟ್ರದ ಮೇಲೆ ಎಂದು ತಿಳಿಯುತ್ತದೆ!

ಹಾಗೆಯೇ; ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ವಿದೇಶಾಂಗ ಮಂತ್ರಿ ಎಸ್. ಜೈಶಂಕರ್ ಅವರ ಹೇಳಿಕೆಗಳನ್ನೂ ದೇಶ ಗಮನಿಸಿದೆ. ರಾಷ್ಟ್ರದ ಬಗ್ಗೆ ಅವರಿಗಿರುವ ಬದ್ಧತೆ, ಆಚಲತೆಯನ್ನು ನೋಡಿದೆ, ಕೊಂಡಾಡಿದೆ. ರಾಷ್ಟ್ರ ದ್ರೋಹ ಮತ್ತು ರಾಷ್ಟ್ರಪ್ರೇಮಕ್ಕೆ ಇರುವ ವ್ಯತ್ಯಾಸವಿದು ಎಂದು ಕಾಂಗ್ರೆಸ್ ನಾಯಕರಿಗೆ ಕುಟುಕಿದ್ದಾರೆ.

ರಾಷ್ಟ್ರ ನಿಂದನೆ, ಸೇನೆಯ ನಿಂದನೆ ಕಾಂಗ್ರೆಸ್ ಪಕ್ಷಕ್ಕೆ ಹೊಸದಲ್ಲ. ಅದು ಕಾಂಗ್ರೆಸ್ ಪಕ್ಷಕ್ಕೆ ಜನ್ಮತಃ ಅಂಟಿರುವ ಜಾಡ್ಯ. ಪಾಕಿಸ್ತಾನ್ ನ್ಯಾಶನಲ್ ಕಾಂಗ್ರೆಸ್ ಪಾರ್ಟಿಯಾಗಿ ರೂಪಾಂತರಗೊಂಡಿರುವ ಆ ಪಕ್ಷದ ಅಸಲಿ ಅಜೆಂಡಾ ಏನು? ಹಿಡೆನ್ ಹಿಡೆನ್ ಏನೆಲ್ಲಾ ಮಾಡುತ್ತಿದೆ..!? ಇದು ನನ್ನ ಮೂಲಭೂತ ಪ್ರಶ್ನೆ ಎಂದು ಹೆಚ್.ಡಿಕೆ ತಿಳಿಸಿದ್ದಾರೆ.

Key words: Congres,  political party, Union Minister, HDK

The post ಕಾಂಗ್ರೆಸ್, ಭಾರತದ ರಾಜಕೀಯ ಪಕ್ಷವೋ? ಅಥವಾ ಶತ್ರು ದೇಶದ ವಕ್ತಾರಿಕೆ ಮಾಡುತ್ತಿರುವ ಪಕ್ಷವೋ? ಕೇಂದ್ರ ಸಚಿವ ಹೆಚ್.ಡಿಕೆ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹಬಳಕೆ ಸಿಲಿಂಡರ್ ಪೂರೈಕೆ: ಆತಂಕ ಬೇಡ ಎಂದ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,11,2026 (www.justkannada.in): ಯುದ್ದದಿಂದಾಗಿ ಹಡಗು ಸಂಚಾರ ನಿಲ್ಲಿಸಿದ್ದಾರೆ. ಹೀಗಾಗಿ ಸಿಲಿಂಡರ್ ಪೂರೈಕೆಯಲ್ಲಿ...

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,11,2026 (www.justkannada.in): ಬಜೆಟ್ ಅಧಿವೇಶನದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ...

ಸಂಶೋಧನೆಗಳಲ್ಲಿ ಸ್ವಂತಿಕೆ ಕೂಡಿರಲಿ, AI ತಂತ್ರಜ್ಞಾನಕ್ಕೆ ದಾಸರಾಗಬೇಡಿ- ಪ್ರೊ. ಶರಣಪ್ಪ ಹಲಸೆ

ಮೈಸೂರು, ಮಾರ್ಚ್,11,2026 (www.justkannada.in): ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ...

LPG ಸಿಲಿಂಡರ್ ಕೊರತೆ: ವಿಧಾನಸಭೆಯಲ್ಲಿ ಪ್ರತಿಧ್ವನಿ, ವಾಕ್ಸಮರ

ಬೆಂಗಳೂರು,ಮಾರ್ಚ್,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ದೇಶದ ಹಲವು...