1
May, 2026

A News 365Times Venture

1
Friday
May, 2026

A News 365Times Venture

ಕಾಳಸಂತೆಯಲ್ಲಿ IPL ಟಿಕೆಟ್ ಮಾರಾಟ: 10 ಆರೋಪಿಗಳ ಬಂಧನ

Date:

ಬೆಂಗಳೂರು, ಏಪ್ರಿಲ್,26,2026 (www.justkannada.in):  ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟ ಮಾಡುತ್ತಿದ್ದ 10 ಆರೋಪಿಗಳನ್ನು ಬೆಂಗಳೂರಿನ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಪ್ರದೀಪ್, ಸಾಗರ್, ಕಿರಣ್, ಜೀವನ್, ಭರತೇಶ್, ಶಶಿಕುಮಾರ್, ಸೋನು, ಕುಮಾರ್, ಶ್ರೀಕಾಂತ್ ಹಾಗೂ ಕಿರಣ್ ಬಂಧಿತ ಆರೋಪಿಗಳು. ಶುಕ್ರವಾರ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆದ ಆರ್ ಸಿಬಿ, ಜಿಟಿ ಪಂದ್ಯದ ಒಂದೇ ಮ್ಯಾಚ್ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ 7 ಎಫ್ ಐ ಆರ್ ದಾಖಲಾಗಿತ್ತು.  ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟ ಮಾಡಿದ್ದ 10 ಆರೋಪಿಗಳನ್ನ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಬಳಿ ಇದ್ದ 19 ಐಪಿಎಲ್ ಟಿಕೆಟ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಕೆ ಎಸ್ ಸಿ ಎ ಸದಸ್ಯರಿಗೆ ನೀಡಿದ್ದ ಕಾಂಪ್ಲಿಮೆಂಟರಿ ಟಿಕೆಟ್ ಗಳೇ ಮಾರಾಟವಾಗಿದ್ದವು. ಕಾಂಪ್ಲಿಮೆಂಟರಿ ಟಿಕೆಟ್ ಮೇಲೆ ಹಣ ನಮೂದು ಅಥವಾ ಸೊನ್ನೆ ಎಂದು ಬರೆದಿರುತ್ತದೆ. ತಮ್ಮಲ್ಲಿರುವ ಟಿಕೆಟ್ ಮೌಲ್ಯದ ಅರಿವಿಲ್ಲದೇ ಆರೋಪಿಗಳು ಈ ಟೆಕೆಟ್ ಗಳನ್ನು ಮಾರಾಟ ಮಾಡಿದ್ದರು.

ಮಫ್ತಿಯಲ್ಲಿ ಟಿಕೆಟ್ ಖರೀದಿಸುವವರ ಸೋಗಿನಲ್ಲಿ ಬಂದ ಪೊಲೀಸರು ಕಾರ್ಯಾಚರಣೆ ನಡೆಸಿ 10 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಗೆ ಟಿಕೆಟ್ ನೀಡಿದವರ ಬಗ್ಗೆ ಪೊಲೀಸರಿಂದ ತನಿಖೆ ಮುಂದುವರೆದಿದೆ.

Key words: IPL ticket, sale, block, 10 accused, arrested

The post ಕಾಳಸಂತೆಯಲ್ಲಿ IPL ಟಿಕೆಟ್ ಮಾರಾಟ: 10 ಆರೋಪಿಗಳ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಎಲೆಕ್ಷನ್ ಮುಗಿದ ತಕ್ಷಣವೇ ಬೆಲೆ ಏರಿಕೆ: ಕೇಂದ್ರದ ವಿರುದ್ದ ಡಿಸಿಎಂ ಡಿಕೆಶಿ ಗುಡುಗು

ಬೆಂಗಳೂರು,ಮೇ,1,2026 (www.justkannada.in):  ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 993 ರೂ. ಹೆಚ್ಚಳವಾದ...

ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಡೆಡ್ ಲೈನ್ ಇಲ್ಲ-ಸಚಿವ ಬೋಸರಾಜು

ವಿಜಯಪುರ,ಮೇ,1,2026 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಯಾವುದೇ ಡೆಡ್ ಲೈನ್ ಇಲ್ಲ...

ಖರ್ಗೆ ಹೇಳಿದ ಮೇಲೆ ಸಿಎಂ ಬದಲಾವಣೆ ಅಧ್ಯಾಯ ಮುಗಿಯಿತು- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,1,2026 (www.justkannada.in):  ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ ಅಧ್ಯಕ್ಷ...

ಮಳೆ ಅವಾಂತರ ತಡೆಗೆ ತ್ವರಿತಗತಿ ಕ್ರಮಕ್ಕೆ ಸೂಚನೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,30,2026 (www.justkannada.in): ಬೆಂಗಳೂರಿನಲ್ಲಿ ಆಗುತ್ತಿರುವ ಮಳೆ ಅವಾಂತರ ತಡೆಯಲು ತ್ವರಿತಗತಿಯಲ್ಲಿ ಕ್ರಮಕೈಗೊಳ್ಳುವಂತೆ...