ನವದೆಹಲಿ,ಆಗಸ್ಟ್,11,2026 (www.justkannada.in): ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ರಾಜ್ಯಕ್ಕೆ ಅನ್ಯಾಯವಾಗುವ ರೀತಿ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶಿಸಿದೆ.
ಮುಂದಿನ 15 ದಿನಗಳ ಕಾಲ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶಿಸಿದೆ. ಇಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ ರೀತಿ ಆದೇಶ ಹೊರಡಿಸಲಾಗಿದೆ. ಒಟ್ಟಾರೆ 15 ದಿನಗಳಲ್ಲಿ 15.6 ಟಿಎಂಸಿ ನೀರು ಹರಿಸುವಂತೆ ಆದೇಶಿದೆ.
ರಾಜ್ಯದಲ್ಲಿ ಮುಂಗಾರು ಮಳೆ ಸರಿಯಾಗಿ ಆಗದ ಹಿನ್ನೆಲೆ ರೈತರು ಸಂಕಷ್ಟಕ್ಕೀಡಾಗಿದ್ದು ಇತ್ತೀಚೆಗೆ ಸ್ವಲ್ಪ ಪ್ರಮಾಣದಲ್ಲಿ ಮಳೆಯಾದರೂ ಸಹ ಕಬಿನಿ ಜಲಾಶಯ ಭರ್ತಿಯಾಗಿದೆ. ಆದರೆ ಕೆಆರ್ ಎಸ್ ಅಣೆಕಟ್ಟೆ ಭರ್ತಿಯಾಗಿಲ್ಲ.
ಇನ್ನು ಮಧ್ಯಾಹ್ನ 3 ಗಂಟೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಿದ್ದು ಸಭೆಯಲ್ಲಿ ಏನು ನಿರ್ಧಾರ ಬರಲಿದೆ ಎಂದು ಕಾದು ನೋಡಬೇಕಿದೆ.
Key words: Cauvery issue, CWRC, orders, release ,water , Tamil Nadu
The post ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ: ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




