25
August, 2026

A News 365Times Venture

25
Tuesday
August, 2026

A News 365Times Venture

ಕಿಡಿಗೇಡಿಗಳ ಕೃತ್ಯ: ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ.

Date:

ಮೈಸೂರು,ಮಾರ್ಚ್,24,2025 (www.justkannada.in): ಹಂದಿಗಳ ಬೇಟೆಗೆ ಇರಿಸಿದ್ದ ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರವಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅಡಕನಹಳ್ಳಿ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಕಿಡಿಗೇಡಿಗಳ ಈ ಕೃತ್ಯ ಮನಕಲಕುವಂತಿದ್ದು, ಇದೀಗ ಹಸು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ನಂಜನಗೂಡು ತಾಲೂಕಿನ ಅಡಕನಹಳ್ಳಿ ಗ್ರಾಮದ ಕೈಗಾರಿಕಾ ಪ್ರದೇಶದ ಜಮೀನಿನಲ್ಲಿ  ಹಸು ಮೇವು ಮೇಯುತಿದ್ದಾಗ ಘಟನೆ ನಡೆದಿದೆ.

ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಎಂಬವರಿಗೆ ಸೇರಿದ ಹಸು ಇದಾಗಿದೆ. ಚನ್ನನಂಜೇಗೌಡ ಅವರು ಗ್ರಾಮದ ವಾಟರ್ ಟ್ಯಾಂಕ್ನ ಬಳಿ ಜಾನುವಾರುಗಳು ಮೇವು ಮೇಯಲು ಬಿಟ್ಟಿದ್ದಾರೆ. ಈ ಮಧ್ಯೆ ಕಿಡಿಗೇಡಿಗಳು ಕಾಡು ಹಂದಿ ಬೇಟೆಗೆ ಅದೇ ಜಾಗದಲ್ಲಿ ಸಿಡಿಮದ್ದು ಅಡಗಿಸಿಟ್ಟಿದ್ದರು. ಈ ನಡುವೆ ಹಸು ಮೇಯುತ್ತಿದ್ದ ವೇಳೆ ಸಿಡಿಮದ್ದು ಸ್ಫೋಟಗೊಂಡು ಗಾಯಗೊಂಡಗೊಂಡಿದೆ. ಸ್ಫೋಟದ ರಭಸಕ್ಕೆ ಹಸುವಿನ ಮುಖ ಛಿದ್ರವಾಗಿದ್ದು, ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸ್ ಪೊಲೀಸರು, ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Key words: Mysore,  Firecrackers,  explode, cow, mouth.

The post ಕಿಡಿಗೇಡಿಗಳ ಕೃತ್ಯ: ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...