1
May, 2026

A News 365Times Venture

1
Friday
May, 2026

A News 365Times Venture

ಕುಂಭಮೇಳಕ್ಕೆ ತೆರಳುವಾಗ ಅಪಘಾತ: ರಾಜ್ಯದ ಇಬ್ಬರು ಸಾವು

Date:

ಪೋರ್ ಬಂದರ್, ಫೆಬ್ರವರಿ,25,2025 (www.justkannada.in):  ಕುಂಭಮೇಳಕ್ಕೆ ತೆರಳುವ ವೇಳೆ ಅಪಘಾತದಕ್ಕೀಡಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಮತ್ತಿಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಇದೀಗ ಗುಜರಾತ್ ನ ಪೋರ್ ಬಂದರ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ರಾಜ್ಯದ ವಿಜಯಪುರ ಜಿಲ್ಲೆಯ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ವಿಶ್ವನಾಥ ಅವಜಿ (55) ಹಾಗೂ ಮಲ್ಲಿಕಾರ್ಜುನ ಸದ್ದಲಗೆ (40) ಮೃತಪಟ್ಟವರು ಎನ್ನಲಾಗಿದೆ.

ಮೃತಪಟ್ಟವರು ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನವರಾಗಿದ್ದು   ನಿಂತಿದ್ದ ಟಿಪ್ಪರ್ ಗೆ ವಾಹನವೊಂದು ವೇಗವಾಗಿ ಹಿಂದಿನಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ವಾಹನದಲ್ಲಿ 17 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ನಿನ್ನೆಯಷ್ಟೆ  ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರಯಾಗ್ರಾಜ್ ನ ಕುಂಭ ಮೇಳಕ್ಕೆ ತೆರಳುತ್ತಿದ್ದ ವೇಳೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ 6 ಜನರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದರು.

Key words: state, Two people, die, accident, Kumbh Mela

The post ಕುಂಭಮೇಳಕ್ಕೆ ತೆರಳುವಾಗ ಅಪಘಾತ: ರಾಜ್ಯದ ಇಬ್ಬರು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಡೆಡ್ ಲೈನ್ ಇಲ್ಲ-ಸಚಿವ ಬೋಸರಾಜು

ವಿಜಯಪುರ,ಮೇ,1,2026 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಯಾವುದೇ ಡೆಡ್ ಲೈನ್ ಇಲ್ಲ...

ಖರ್ಗೆ ಹೇಳಿದ ಮೇಲೆ ಸಿಎಂ ಬದಲಾವಣೆ ಅಧ್ಯಾಯ ಮುಗಿಯಿತು- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,1,2026 (www.justkannada.in):  ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ ಅಧ್ಯಕ್ಷ...

ಮಳೆ ಅವಾಂತರ ತಡೆಗೆ ತ್ವರಿತಗತಿ ಕ್ರಮಕ್ಕೆ ಸೂಚನೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,30,2026 (www.justkannada.in): ಬೆಂಗಳೂರಿನಲ್ಲಿ ಆಗುತ್ತಿರುವ ಮಳೆ ಅವಾಂತರ ತಡೆಯಲು ತ್ವರಿತಗತಿಯಲ್ಲಿ ಕ್ರಮಕೈಗೊಳ್ಳುವಂತೆ...

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ, ಆ ಪ್ರಶ್ನೆಯೇ ಉದ್ಬವಿಸಲ್ಲ- ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರುಗಿ,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ ಆ ಸಿಎಂ ಬದಲಾವಣೆ...