ಬೆಂಗಳೂರು,ಏಪ್ರಿಲ್,27,2026 (www.justkannada.in): ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಮೊಹಮ್ಮದ್ ಶಾರಿಕ್ ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಎನ್ ಐಎ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
2022 ನವೆಂಬರ್ 19 ರಂದು ಆಟೋದಲ್ಲಿ ಮೊಹಮ್ಮದ್ ಶಾರಿಕ್ ಕುಕ್ಕರ್ ಬಾಂಬ್ ತೆಗೆದು ಹೋಗುತ್ತಿದ್ದ ವೇಳೆಯೇ ಕುಕ್ಕರ್ ಬಾಂಬ್ ಸ್ಪೋಟಗೊಂಡಿತ್ತು. ಗಂಭೀರ ಗಾಯಗೊಂಡು ಮೊಹಮ್ಮದ್ ಶಾರಿಕ್ ಬಂಧಿತನಾಗಿದ್ದ.
ಈ ಮಧ್ಯೆ ಮೊಹಮ್ಮದ್ ಶಾರಿಕ್ ಕೋರ್ಟ್ ಮುಂದೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದ. ಇದೀಗ ಬೆಂಗಳೂರಿನ ಎನ್ ಐಎ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು ಮೊಹಮ್ಮದ್ ಶಾರಿಕ್ 10 ವರ್ಷ ಕಠಿಣ ಜೈಲುಶಿಕ್ಷೆ 94 ಸಾವಿರ ರೂ. ದಂಡ ವಿಧಿಸಿದೆ.
Key words: Cooker bomb blast, Mohammad Shariq, sentenced, 10 years, imprisonment
The post ಕುಕ್ಕರ್ ಬಾಂಬ್ ಸ್ಪೋಟ ಕೇಸ್: ಮೊಹಮ್ಮದ್ ಶಾರಿಕ್ ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




